ಉಡುಪಿ : ಭಾರೀ ಮಳೆ ಹಿನ್ನೆಲೆ, ಶಾಲೆ ಕಾಲೇಜಿಗೆ ನಾಳೆ ರಜೆ ಘೋಷಣೆ

ಉಡುಪಿ : ಕಳೆದ ಮೂರ್ನಾಲ್ಕು ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ಹೆಬ್ರಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು, ನಾಳೆ ಹೆಬ್ರಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ (tomorrow School college holiday) ಮಾಡಲಾಗಿದೆ.

ಉಡುಪಿ ಜಿಲ್ಲೆಯಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ ೫ರಂದು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪದವಿ ಪೂರ್ವ ಕಾಲೇಜು ಜೊತೆಗೆ ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್.‌ ಆದೇಶ ಹೊರಡಿಸಿದ್ದಾರೆ. ಕರಾವಳಿ ಭಾಗದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆ ಸುರಿಯಲಿದೆ.

heavy rain in Udupi tomorrow School and college holiday

ದಕ್ಷಿಣ ಕನ್ನಡದಲ್ಲಿ ನಿಲ್ಲದ ವರುಣನ ಅಬ್ಬರ : ಕುಕ್ಕೆ ಕ್ಷೇತ್ರದ ಸ್ನಾನಘಟ್ಟ ಮುಳುಗಡೆ

ಮಂಗಳೂರು : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ವರುಣನ ಅಬ್ಬರ ಯಾಕೋ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಲೇ ಇಲ್ಲ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ಜನತೆ ಮನೆಯಿಂದ ಹೊರಗೆ ಕಾಲಿಡುವುದಕ್ಕೂ ಯೋಚಿಸುವಂತಾಗಿದೆ. ಮಳೆಯ ಅವಾಂತರವು ಜನ ಸಾಮಾನ್ಯರ ಜೊತೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನಕ್ಕೆ ಬರುವವರೆಗೂ ಕಾಟ ನೀಡಿದೆ. ಭಾರೀ ಮಳೆಯಿಂದಾಗಿ ಕುಮಾರಧಾರಾ ಹಾಗೂ ನೇತ್ರಾವತಿ ನದಿಗಳಲ್ಲಿನ ಹರಿವು ಹೆಚ್ಚಾಗಿದೆ. ಎರಡೂ ನದಿಗಳು ಅಪಾಯ ಮಟ್ಟವನ್ನು ಮೀರಿ ಹರಿದ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟವು ಜಲಾವೃತಗೊಂಡಿದೆ. ಸ್ನಾನಘಟ್ಟದ ಜೊತೆತಲ್ಲಿ ದೇವರಕಟ್ಟೆ ಕೂಡ ಮುಳಗುಡೆಯಾಗಿದ್ದು ಭಕ್ತಾದಿಗಳಿಗೆ ಅಡಚಣೆಯುಂಟಾಗಿದೆ.

ಕುಕ್ಕೆ ಸುಬ್ರಹ್ಮಣ್ಯನ ದರ್ಶನಕ್ಕೆ ಬರುವವರು . ಸರ್ಪ ಸಂಸ್ಕಾರಗಳಂತಹ ಕಾರ್ಯಗಳಲ್ಲಿ ಭಾಗಿಯಾಗುವವರು ಕುಮಾರಧಾರಾ ಸ್ನಾನ ಘಟ್ಟದಲ್ಲಿ ಮಿಂದೇಳುವುದು ಸರ್ವೇ ಸಾಮಾನ್ಯ. ಆದರೆ ಇದೀಗ ಸ್ನಾನ ಘಟ್ಟವೇ ಮುಳುಗಡೆಯಾಗಿರುವುದು ಭಕ್ತರಿಗೆ ತೊಂದರೆಯನ್ನುಂಟು ಮಾಡಿದೆ. ಆದರೂ ಸಹ ಕೆಲ ಭಕ್ತರು ಅಪಾಯವನ್ನೂ ಲೆಕ್ಕಿಸದೇ ಪ್ರವಾಹದ ನೀರಿನಲ್ಲಿಯೇ ತೀರ್ಥ ಸ್ನಾನವನ್ನು ಕೈಗೊಳ್ಳುತ್ತಿದ್ದಾರೆ. ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ದೇವಸ್ಥಾನದ ಆಡಳಿತ ಮಂಡಳಿ ಮುಂಜಾಗ್ರತೆಯನ್ನು ವಹಿಸಿದೆ.

ಕುಮಾರಧಾರಾ ಸ್ನಾನ ಘಟ್ಟದಲ್ಲಿ ರಾತ್ರಿ ಹಗಲು ಎನ್ನದೇ ಪಾಳಿಯ ಅನುಸಾರ ಇಬ್ಬರು ರಕ್ಷಕರ ದಳವನ್ನು ಇರಿಸಲಾಗಿದೆ. ಯಾವುದೇ ಸಂದರ್ಭದಲ್ಲಿಯೂ ಭಕ್ತರು ಪ್ರವಾಹದಿಂದಾಗಿ ಅಪಾಯಕ್ಕೆ ಸಿಲುಕಿದ ಸಂದರ್ಭದಲ್ಲಿ ಯಾವುದೇ ಅವಘಡ ಸಂಭವಿಸದಂತೆ ನೆರವಾಗುವ ನಿಟ್ಟಿನಲ್ಲಿ ರಕ್ಷಕರನ್ನು ನಿಯೋಜಿಸಲಾಗಿದೆ. ಮಾತ್ರವಲ್ಲದೇ ಸ್ನಾನಘಟ್ಟದಲ್ಲಿ ಹಗ್ಗವನ್ನು ಕಟ್ಟಲಾಗಿದ್ದು ಭಕ್ತರು ಹಗ್ಗವನ್ನು ಹಿಡಿದು ಸುರಕ್ಷಿತವಾಗಿ ತೀರ್ಥಸ್ನಾನ ಕೈಗೊಳ್ಳಲಿ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ಲಾನ್​ ಮಾಡಿದೆ.

ಇದನ್ನೂ ಓದಿ : Virat Kohli : ದ್ರಾವಿಡ್, ಸಚಿನ್‌ಗೂ ಸಾಧ್ಯವಾಗದ ದಾಖಲೆ… ಕಿಂಗ್ ಕೊಹ್ಲಿ ಹೊಸ ರೆಕಾರ್ಡ್ !

ಇದನ್ನೂ ಓದಿ : Roshan’s dead body found : ಮರವಂತೆ ಬೀಚ್​ಗೆ ಕಾರು ಬಿದ್ದ ಪ್ರಕರಣ : ನಾಪತ್ತೆಯಾಗಿದ್ದ ರೋಷನ್​ ಮೃತದೇಹ ಪತ್ತೆ

heavy rain in Udupi tomorrow School and college holiday

Comments are closed.