Heavy Rain School Holiday : ಭಾರೀ ಮಳೆ ಮಂಗಳೂರು, ಮೂಡಬಿದಿರೆ, ಬಂಟ್ವಾಳ ತಾಲೂಕು ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ಕಳೆದ ರಾತ್ರಿಯಿಂದಲೂ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ, ಮೂಡಬಿದಿರೆ ತಾಲೂಕು ವ್ಯಾಪ್ತಿ ಯಲ್ಲಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ (Heavy Rain School Holiday announcement) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಮಂಗಳೂರು, ಉಳ್ಳಾಲ, ಮೂಲ್ಕಿ, ಮೂಡಬಿದಿರೆ, ಬಂಟ್ವಾಳ ತಾಲೂಕುಗಳಲ್ಲಿ ಕಳೆದ ರಾತ್ರಿಯಿಂದಲೂ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉಳಿದಂತೆ ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ಸ್ಥಳೀಯ ಪರಿಸ್ಥಿತಿಯನ್ನು ನಿರ್ಣಯಿಸಿ ತಹಶೀಲ್ದಾರ್‌ ಹಾಗೂ ಬಿಇಓಗಳು ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ 2 ದಿನ ಭಾರಿ ಮಳೆ: 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಕರಾವಳಿ ಕರ್ನಾಟಕ, ಮಲೆನಾಡು ಸೇರಿದಂತೆ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಜುಲೈ 29 ಮತ್ತು 30 ರಂದು ಕರಾವಳಿ, ಮಲೆನಾಡು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿಂದು 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಭಾರತದ ಹಲವು ಭಾಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಉತ್ತರ ಭಾರತದಲ್ಲಿ ಮಳೆಯ ಆರ್ಭಟ ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : KCET ಫಲಿತಾಂಶ 2022 : ಫಲಿತಾಂಶಕ್ಕಾಗಿ kea.kar.nic.in ಕ್ಲಿಕ್‌ ಮಾಡಿ

ಇದನ್ನೂ ಓದಿ : ಅಧಿಕಾರಕ್ಕೇರೋ ಕನಸಿಗೆ ಸಾಲು ಸಾಲು ಕೊಲೆ ಅಡ್ಡಿ: ಬಿಜೆಪಿಗೆ ಕಂಟಕವಾದ ಪ್ರವೀಣ್, ಹರ್ಷ ಕೊಲೆ‌ ಕೇಸ್

Heavy Rain School Holiday announcement for schools in Mangalore, Moodbidiri, Bantwal taluk

Comments are closed.