Heavy rain school Holiday : ಕರಾವಳಿಯಲ್ಲಿ ಮಳೆಯ ಆರ್ಭಟ : ಇಂದು ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು : ನಿನ್ನೆಯಿಂದಲೂ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ (Heavy rain school Holiday ), ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ಕಳೆದ ಮೂರು ದಿನಗಳಿಂದಲೂ ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿದೆ. ಗುರುವಾರ ಬೆಳಗ್ಗೆಯಿಂದಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ರ್ನಾಟಕದ ಕರಾವಳಿ, ಮಲೆನಾಡು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅದ್ರಲ್ಲೂ ಹಾಸನ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಹಾಸನ ಡಿಡಿಪಿಐ ಪ್ರಕಾಶ್‌ ಬುಧವಾರ ರಜೆ ಘೋಷಿಸಿದ್ದರು

ರಾಜ್ಯ ಹವಾಮಾನ ಇಲಾಖೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಇನ್ನು ಮಳೆಯ ಹಿನ್ನೆಲೆಯಲ್ಲಿ ನೀಡಲಾಗಿದ್ದ, ರಜಾ ದಿನವನ್ನು ಸರಿದೂಗಿಸಲು ಬೇರೆ ರ

ಇದನ್ನೂ ಓದಿ : ಕೃತಿಕಾ ಮಳೆಯ ಅಬ್ಬರ : 1 ರಿಂದ 10ನೇ ತರಗತಿವರೆಗೆ ರಜೆ ಘೋಷಣೆ

ಇದನ್ನೂ ಓದಿ : Karnataka SSLC Results 2022 LIVE : ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ

Heavy rain school Holiday for Dakshina kannada Mangalore

Comments are closed.