ಭಾನುವಾರ, ಏಪ್ರಿಲ್ 27, 2025
Homeeducationಉಡುಪಿ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ಜುಲೈ 27 ರಂದು ರಜೆ ಘೋಷಣೆ

ಉಡುಪಿ ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ಜುಲೈ 27 ರಂದು ರಜೆ ಘೋಷಣೆ

- Advertisement -

ಉಡುಪಿ : Udupi School College Holiday : ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ರಜೆ ಘೋಷಣೆ ಮಾಡಿದ್ದಾರೆ.

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್‌, ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಕಳೆದ 3 ದಿನಗಳಿಂದಲೂ ಜಿಲ್ಲಾಡಳಿತ ರಜೆ ಘೋಷಿಸಿತ್ತು. ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಕಾಪು, ಕಾರ್ಕಳ, ಹೆಬ್ರಿ, ಬ್ರಹ್ಮಾವರ, ಉಡುಪಿ ತಾಲೂಕುಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರ ವರೆಗೆ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Heavy rain Udupi School College Holiday declared July 27th

ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಕಾಪು, ಕಾರ್ಕಳ, ಹೆಬ್ರಿ, ಬ್ರಹ್ಮಾವರ, ಉಡುಪಿ ತಾಲೂಕುಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 28ರ ವರೆಗೆ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹವಾಮಾನ ಇಲಾಖೆಯು ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ಜಲಾವೃತವಾಗುವ ಪ್ರದೇಶಗಳನ್ನು ತಪ್ಪಿಸಲು ಎಚ್ಚರಿಕೆಯನ್ನು ನೀಡಿದೆ ಮತ್ತು ನಿರಂತರ ಮಳೆಯಿಂದ ಕುಸಿಯುವ ದುರ್ಬಲ ರಚನೆಗಳಿಂದ ದೂರವಿರಲು ಕೇಳಿದೆ. ನಿರಂತರ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪ್ರದೇಶಗಳು ಪ್ರವಾಹ ಮತ್ತು ಭೂಕುಸಿತವನ್ನು ಅನುಭವಿಸುತ್ತಿವೆ.

ಜಿಲ್ಲೆಯ ಜೀವನದಿಗಳು ತುಂಬಿ ಹರಿಯುತ್ತಿರುವುದರಿಂದಾಗಿ ಬಹುತೇಕ ಕಡೆಗಳಲ್ಲಿ ಕೃತಕ ನೆರೆ ಆವರಿಸಿದೆ. ಬಹುತೇಕ ಕಡೆಗಳಲ್ಲಿ ಮರಗಳು ಉರುಳಿಬಿದ್ದಿದ್ದು, ಮನೆಗಳಿಗೆ ಹಾನಿಯಾಗಿದೆ. ಇನ್ನು ಕಾಪು ಸಮೀಪದ ಉಳಿಯಾರಗೋಳಿ ದಂಡತೀರ್ಥ ಶಾಲೆಯ ಬಳಿಯಲ್ಲಿ ಬಾರೀ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಹಿನ್ನೆಲೆಯಲ್ಲಿ ವಿದ್ಯುತ್‌ ಕಂಬಗಳು ತುಂಡಾಗಿವೆ. ಇದರಿಂದಾಗಿ ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ.

ಬೈಂದೂರು ತಾಲೂಕಿನಲ್ಲಿ ಸೌಪರ್ಕಿಣಕಾ ನದಿ ಹಾಗೂ ಬ್ರಹ್ಮಕುಂಡ ನದಿ ತುಂಬಿ ಹರಿಯುತ್ತಿದೆ. ಹೊಸಾಡು, ಚಿಕ್ಕಳಿ, ನಾಡ, ಮಾರಣಕಟ್ಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೃತಕ ನೆರೆ ಹಾವಳಿ ಉಂಟಾಗಿದೆ. ವಾರಾಹಿ ನದಿ ತುಂಬಿ ಹರಿಯುತ್ತಿದ್ದು, ಹಾಲಾಡಿ, ಬಲಾಡಿ, ಹಳ್ನಾಡು, ಕಂಡ್ಲೂರು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದೆ. ಮಂಗಳವಾರ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು.

ಇದನ್ನೂ ಓದಿ : Krishna Janmashtami : ಸಾಲಿಗ್ರಾಮ : ಆಗಸ್ಟ್ 27 ರಂದು ಮುದ್ದು ಕೃಷ್ಣ – ಮುದ್ದು ರಾಧಾ ಸ್ಪರ್ಧೆ

ಇದನ್ನೂ ಓದಿ : Agumbe Ghat Travel Ban : ಆಗುಂಬೆ ಘಾಟ್‌ ರಸ್ತೆಯಲ್ಲಿ ಬಿರುಕು : ಭಾರೀ ವಾಹನ ಸಂಚಾರಕ್ಕೆ ನಿಷೇಧ

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular