Red Alert : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 26 ರಂದು ಶಾಲೆಗಳಿಗೆ ರಜೆ : ಪದವಿ ತರಗತಿಗಳಿಗೆ ಆನ್‌ಲೈನ್‌ ಕ್ಲಾಸ್‌

ಮಂಗಳೂರು : Red Alert School College holiday : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳ ಸುರಿಯುತ್ತಿದ್ದು, ಜುಲೈ 26 ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚರಿಕಾ ಕ್ರಮವಾಗಿ ಬುಧವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜು, ಕಾಲೇಜು, ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಗ್ರಾಮೀಣ ಹಾಗೂ ದೂರದ ಊರುಗಳಿಂದ ಬರುವ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅನಾನುಕೂಲವಾಗುವ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾರ್ಥಿಗಳು ಅವಕಾಶ ಕಲ್ಪಿಸಬೇಕು. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹಲವು ಕಡೆಗಳಲ್ಲಿ ಮನೆಗಳು ಕುಸಿತವಾಗಿದ್ದು, ಮರಗಳು ಉರುಳಿ ಬಿದ್ದು ಲಕ್ಷಾಂತರ ಮೌಲ್ಯದ ನಷ್ಟ ಸಂಭವಿಸಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಾಧಾರ ನದಿ ತುಂಬಿ ಹರಿಯುತ್ತಿರುವುದರಿಂದಾಗಿ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಮಂಗಳೂರು, ಮೂಡಬಿದಿರೆ ತಾಲೂಕುಗಳಲ್ಲಿಯೂ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಳೆಯೂ ಕೂಡ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : Dr. K. Vidyakumari : ಉಡುಪಿ : ಬೀಚ್, ಜಲಪಾತಗಳಲ್ಲಿ ಸೆಲ್ಪಿ ನಿಷೇಧ : ಡಿಸಿ ಡಾ.ಕೆ. ವಿದ್ಯಾಕುಮಾರಿ

ಇದನ್ನೂ ಓದಿ : Udupi News : ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ : ಎಸ್ಪಿ ಸ್ಪಷ್ಟನೆ

Comments are closed.