hijab controversy : ಹಿಜಾಬ್​ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ಕೊಡಿ : ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಬೇಡಿಕೆ

ಉಡುಪಿ : ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು(hijab controversy) ಆರಂಭಗೊಂಡಿವೆ. ಈಗಾಗಲೇ ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾರಣಕ್ಕೂ ಹಿಜಾಬ್​ ಧರಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಖಡಾ ಖಂಡಿತವಾಗಿ ಹೇಳಿದ್ದಾರೆ. ಉಡುಪಿಯಲ್ಲಿ ಮೊದಲು ಹಿಜಾಬ್​ ವಿವಾದದ ಕಿಡಿ ಹೊತ್ತಿಸಿದ್ದ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಇಂದು ಕೂಡ ಪರೀಕ್ಷೆಯನ್ನು ಬರೆಯದೇ ಹಿಜಾಬ್​​ ಧರಿಸುವ ಬೇಡಿಕೆ ಇಟ್ಟಿದ್ದಾರೆ.


ಬುರ್ಖಾಗಳನ್ನು ತೆಗದಿಡಲು ಪ್ರತ್ಯೇಕ ಕೊಠಡಿಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್​ ಹೋರಟಗಾರ್ತಿ ರೇಷಂ ಇಂದು ಪರೀಕ್ಷೆ ಬರೆಯುವವರಿದ್ದಾರೆ. ಹಿಜಾಬ್​ ಕಡ್ಡಾಯಗೊಳಿಸಬೇಕೆಂದು ಕೋರಿ ಕೋರ್ಟ್​ ಮೆಟ್ಟಿಲು ಹತ್ತಿದ್ದ ಆರು ಮಂದಿ ವಿದ್ಯಾರ್ಥಿನಿಯರ ಪೈಕಿ ಇಂದು ರೇಷಂ ಹಾಗೂ ಆಲಿಯಾ ಆಸಾದಿಗೆ ಇಂದು ಪರೀಕ್ಷೆ ಇದೆ. ಹಾಲ್​ ಟಿಕೆಟ್​ ಸಮೇತ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಈ ಇಬ್ಬರೂ ಪರೀಕ್ಷಾ ಕೇಂದ್ರಗಳಲ್ಲಿಯೂ ತಮಗೆ ಹಿಜಾಬ್​ ಧಿರಸಲು ಅವಕಾಶ ನೀಡಬೇಕೆಂದು ಕ್ಯಾತೆ ತೆಗೆದಿದ್ದಾರೆ ಎನ್ನಲಾಗಿದೆ.


ಪರೀಕ್ಷೆಗಳು ಆರಂಭವಾಗಿದ್ದರೂ ಈ ಇಬ್ಬರೂ ವಿದ್ಯಾರ್ಥಿನಿಯರು ಪ್ರಾಚಾರ್ಯರ ಕಚೇರಿಯಲ್ಲೇ ಕುಳಿತು ಚರ್ಚೆ ನಡೆಸಿದ್ದಾರೆ. ಶಾಲಾ – ಕಾಲೇಜುಗಳಲ್ಲಿ ಹಿಜಾಬ್​ ಧರಿಸುವಂತಿಲ್ಲ ಎಂದು ಸರ್ಕಾರ ಹೇಳಿದ್ದರೂ ಸಹ ಹೈಕೋರ್ಟ್ ಮೆಟ್ಟಿಲೇರಿದ್ದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅಲ್ಲೂ ಹಿನ್ನೆಡೆಯಾಗಿತ್ತು.

ಇದನ್ನು ಓದಿ : basanagowda patil yatnal : ಗೃಹ ಸಚಿವ ಜ್ಞಾನೇಂದ್ರ ವಿರುದ್ಧ ಅಸಮಾಧಾನ ಹೊರ ಹಾಕಿದ ಶಾಸಕ ಯತ್ನಾಳ್​

hijab controversy resham alia requests for permission to write exam withhijab

Comments are closed.