ಬೆಂಗಳೂರು :hijab controversy: ರಾಜ್ಯದಲ್ಲಿ ಹಿಜಬ್ ಹಾಗೂ ಕೇಸರಿ ಶಾಲು ನಡುವಿನ ವಿವಾದವು ತಾರಕಕ್ಕೇರಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಹೋರಾಟವು ಹಿಂಸಾಚಾರ ರೂಪವನ್ನು ಪಡೆದುಕೊಂಡಿದೆ. ಹೈಕೋರ್ಟ್ ಆದೇಶಕ್ಕೂ ಮುನ್ನವೇ ಕೇಸರಿ ಶಾಲು ಹಾಗೂ ಹಿಜಬ್ ನಡುವಿನ ಗಲಾಟೆಯು ಕಲ್ಲು ತೂರಾಟದವರೆಗೆ ಹೋಗಿದೆ. ಶಿವಮೊಗ್ಗ, ಉಡುಪಿ, ದಾವಣೆಗೆರೆ ಸೇರಿದಂತೆ ಹಲವಡೆಗಳಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಬ್ ನಡುವಿನ ವಿವಾದವನ್ನು ಹಿಂಸಾಚಾರದ ರೂಪಕ್ಕೆ ತೆಗೆದುಕೊಂಡು ಹೋಗುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ನಾಳೆಯಿಂದ ಮೂರು ದಿನಗಳ ಕಾಲ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲಾ – ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದೆ. ಎಲ್ಲಾ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ, ಪದವಿ, ಇಂಜಿನಿಯರಿಂಗ್, ವಿಶ್ವವಿದ್ಯಾಲಯ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಬುಧವಾರ, ಗುರುವಾರ ಹಾಗೂ ಶುಕ್ರವಾರ ಬಂದ್ ಇರಲಿದೆ.
ಇನ್ನು ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ನಾಳೆಯಿಂದ ರಾಜ್ಯದಲ್ಲಿ ಎಲ್ಲಾ ಶಾಲಾ – ಕಾಲೇಜುಗಳು ಮೂರು ದಿನಗಳ ಕಾಲ ಬಂದ್ ಇರಲಿದೆ. ಸಮವಸ್ತ್ರ ವಿವಾದ ರಾಜ್ಯದಲ್ಲಿ ತಾರಕಕ್ಕೇರಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ಈ ನಿರ್ಧಾರ ಕೈಗೊಂಡಿದ್ದಾರೆ.ಈ ಸಂದರ್ಭದಲ್ಲಿ ಯಾರು ಕೂಡ ಸಮವಸ್ತ್ರ ವಿವಾದದ ಪ್ರತಿಭಟನೆಗಳನ್ನು ನಡೆಸುವಂತಿಲ್ಲ. ರಾಜ್ಯ ಹೈಕೋರ್ಟ್ನಲ್ಲಿ ಈ ಸಂಬಂಧ ಚರ್ಚೆ ನಡೆಯುತ್ತಿದೆ. ಹೈಕೋರ್ಟ್ ಸೂಕ್ತವಾದ ಆದೇಶವನ್ನು ನೀಡುತ್ತದೆ. ಅಲ್ಲಿಯವರೆಗೂ ವಿದ್ಯಾರ್ಥಿಗಳು ಕಾಯಬೇಕು. ರಾಜ್ಯದಲ್ಲಿ ಸಮವಸ್ತ್ರ ವಿವಾದ ಅನ್ನೋದು ಟ್ರೆಂಡ್ ರೀತಿಯಲ್ಲಿ ಆಗಬಿಟ್ಟಿದೆ. ಯುವಕರು ಈ ರೀತಿ ಶಾಂತಿ ಕದಡುವ ಕಾರ್ಯವನ್ನು ಮಾಡಬಾರದು ಎಂದು ಹೇಳಿದರು. ಇತ್ತ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : Hijab Explainer: ಹಿಜಾಬ್ ಎಂದರೇನು? ಬುರ್ಖಾ, ನಿಕಾಬ್‌ಗೂ ಹಿಜಾಬ್‌ಗೂ ಇರುವ ವ್ಯತ್ಯಾಸವೇನು?

hijab controversy :Vacation to school - colleges for three days from tomorrow
