ಹಿಜಾಬ್ ತೀರ್ಪು ಹಿನ್ನೆಲೆ : ಮಾರ್ಚ್ 15 ರಂದು ಉಡುಪಿ, ದ.ಕ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಉಡುಪಿ/ಮಂಗಳೂರು : ಕರ್ನಾಟಕ ಹೈಕೋರ್ಟ್ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ  ಮಾರ್ಚ್ 15 ರಂದು ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆಯನ್ನು (school college hoilidy) ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅದ್ರಲ್ಲೂ  ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ‌. ಅಲ್ಲದೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತಗಳು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಆಂತರಿಕ ಪರೀಕ್ಷೆಗಳನ್ನು ಮುಂದೂಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.  ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ ಉಡುಪಿ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಹಿಜಾಬ್ ತೀರ್ಪು ಹಿನ್ನೆಲೆಯಲ್ಲಿ : ಬೆಂಗಳೂರಲ್ಲಿ 1 ವಾರ ನಿಷೇದಾಜ್ಞೆ, ರಾಜ್ಯದಾದ್ಯಂತ ಹೈಅಲರ್ಟ್

ಇದನ್ನೂ ಓದಿ : ನಾಳೆ ಹಿಜಾಬ್ ಪ್ರಕರಣದ ಹೈಕೋರ್ಟ್ ತೀರ್ಪು: ಬೆಂಗಳೂರು ಸೇರಿ ರಾಜ್ಯದಾದ್ಯಂತ ಹೈ ಅಲರ್ಟ್

(Hijab Judgement : Holiday for school and college in Udupi, DK district on March 15)

Comments are closed.