ಹಿಂದಿ ಭಾಷಾ ಶಿಕ್ಷಕರ ಹುದ್ದೆ ನೇಮಕಾತಿ : 1:1 ತಾತ್ಕಾಲಿಕ ಪಟ್ಟಿ ಪ್ರಕಟ

0

ಸಾರ್ವಜನಿಕ ಶಿಕ್ಷಣ ಇಲಾಖೆ 2014-15ನೇ ಸಾಲಿನ ಪ್ರೌಢಶಾಲಾ (ಹಿಂದಿ ಭಾಷಾ) ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಮೈಸೂರು ವಿಭಾಗದ ಪರಿಷ್ಕೃತ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಆಯ್ಕೆಪಟ್ಟಿಯನ್ನು ಪರೀಕ್ಷಿಸಬಹುದಾಗಿದೆ.

ಮೈಸೂರು ವಿಭಾಗದ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಚೆಕ್‌ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಥವಾ ಈ ಕೆಳಗಿನ ಡೈರೆಕ್ಟ್‌ ಲಿಂಕ್‌ ಕ್ಲಿಕ್ ಮಾಡಿರಿ.

ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ (2014-15ನೇ ಸಾಲಿನ) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಉಚ್ಛನ್ಯಾಯಾಲಯದಲ್ಲಿ ದಾಖಲಿಸಿದ್ದ ರಿಟ್ ಅರ್ಜಿ ಸಂಖ್ಯೆ 12430/2017 ಕ್ಕೆ ಮಾನ್ಯ ಉಚ್ಛ ನ್ಯಾಯಾಲಯದ ದಿನಾಂಕ-18-09-2019 ರ ತೀರ್ಪನ್ನು ಅನುಷ್ಠಾನಗೊಳಿಸಲು ಮಾನ್ಯ ನ್ಯಾಯಾಲಯವು ಆದೇಶಿಸಿರುತ್ತದೆ.

ಅದರಂತೆ ಸರ್ಕಾರದ ಆದೇಶ ಸಂಖ್ಯೆ: ಇಡಿ:15.ಎಲ್‌.ಬಿ.ಪಿ 2020 ಬೆಂಗಳೂರು ದಿನಾಂಕ : 19-08-2020 ರನ್ವಯ ಮಾನ್ಯ ಆಯುಕ್ತರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರ ಪತ್ರ ಸಂಖ್ಯೆ ಸಿ4(1) ಪ್ರೌ.ಶಾ.ಶಿ.ನೇ: 07/2015-16 ದಿನಾಂಕ 11/09/2020 ರ ಆದೇಶದಂತೆ ಮೈಸೂರು ವಿಭಾಗದ ಪರಿಷ್ಕೃತ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.

ಮೈಸೂರು ವಿಭಾಗದ ಅಭ್ಯರ್ಥಿಗಳು ಪ್ರಸ್ತುತ ಪ್ರಕಟಿಸಲಾದ ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ದಿನಾಂಕ 14-09-2020 ರಿಂದ 22-09-2020 ರವರೆಗೆ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆ ಅರ್ಜಿಗಳನ್ನು ವಿಳಾಸ – ” ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಸಹನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೈಸೂರು ವಿಭಾಗ ಮೈಸೂರು” ಇಲ್ಲಿಗೆ ಕಳುಹಿಸಬಹುದಾಗಿದೆ.

Leave A Reply

Your email address will not be published.