ಬೆಂಗಳೂರು : ರಾಜ್ಯದಲ್ಲಿ ಕಾನೂನುಬಾಹಿರವಾಗಿ ನಿಯೋಜನೆ ಗೊಂಡಿರುವ ಶಿಕ್ಷಕರನ್ನು ಕೂಡಲೇ ಮೂಲ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಮೂಲಕ ಶಿಕ್ಷಕರನ್ನು ಕಾನೂನು ಬಾಹಿರವಾಗಿ ನಿಯೋಜನೆ ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶರು ಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಕ್ಕಳ ಶೈಕ್ಷಣಿಕ ಹಿತಾಸಕ್ತಿ ಯನ್ನು ಗಮನದಲ್ಲಿರಿಸದೇ, ನಿಯಮಬಾಹಿರವಾಗಿ ಶಿಕ್ಷಕರನ್ನು ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ, ನಿಯೋಜನೆ ಮಾಡಿರುವುದು ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ರಾದ ಡಾ.ರೂಪಶ್ರೀ ಅವರು ಬೆಂಗಳೂರು ಮತ್ತು ಮೈಸೂರು ವಿಭಾಗದ ಎಲ್ಲಾ ಉಪ ನಿರ್ದೇಶಕರುಗಳಿಗೆ, ಬೆಂಗಳೂರು ಮತ್ತು ಮೈಸೂರು ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆದೇಶ ಹೊರಡಿಸಿ ದ್ದಾರೆ. ನಿಯಮ ಉಲ್ಲಂಘಿಸಿ ಶಿಕ್ಷಕರುಗಳನ್ನು ನಿಯೋಜನೆಗೊಳಿಸಿ ರುವ ಉಪ ನಿರ್ದೇಶಕರುಗಳ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಸರ್ಕಾರದ ನಿರ್ದೇಶನವಿರುತ್ತದೆ.
ತಕ್ಷಣದಿಂದಲೇ ಕಾನೂನುಬಾಹಿರಬಾಗಿ ನಿಯೋಜನೆಗೊಂಡಿರುವ ಶಿಕ್ಷಕರು ಮೂಲ ಶಾಲೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡಲು ಅಗತ್ಯಕ್ರಮ ಕೈಗೊಳ್ಳಬೇಕು. ಈ ಕುರಿತು ಇಲಾಖೆಗೆ ವರದಿ ಸಲ್ಲಿಸ ಬೇಕು. ತಪ್ಪಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೆಂದು ತಿಳಿಸಿದ್ದಾರೆ.
