Heavy Rain Red Alert : ಉಡುಪಿ/ ಮಂಗಳೂರು : ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 16 ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದ ಭಾರತೀಯ ಹವಾಮಾನ ಇಲಾಖೆ ಜುಲೈ 16 ರಂದು ಭಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಮುನ್ನೆಚ್ಚರಿಕಾ ಕ್ರಮವಾಗಿ ಎರಡೂ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : 3 ಲಕ್ಷ ಬಿಪಿಎಲ್ ಕಾರ್ಡ್ ರದ್ದು: ನಿಮ್ಮ ಪಡಿತರ ಚೀಟಿ ಚಾಲ್ತಿಯಲ್ಲಿದ್ಯಾ ಚೆಕ್ ಮಾಡಿ
ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮೊ ತರಗತಿಗಳು ಎಂದಿನಂತೆ ನಡೆಯಲಿದೆ. ಆದರೆ ಕಾಲೇಜುಗಳಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸುವಂತಿಲ್ಲ. ಸಮುದ್ರ ತೀರದಲ್ಲಿ ವಾಸಿಸುವವರು, ನದಿ ಪಾತ್ರದಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಳಿತ ಸೂಚನೆಯನ್ನು ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ.

ಇದನ್ನೂ ಓದಿ : ಜೂನ್ ತಿಂಗಳ ಗೃಹಲಕ್ಷ್ಮೀ ಹಣ ಬಂದಿಲ್ವಾ ? ಕಾರಣ ಇಲ್ಲಿದೆ ನೋಡಿ
ಭಾರತೀಯ ಹವಾಮಾನ ಇಲಾಖೆ ಇನ್ನೂ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಮಂಗಳವಾರದಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರಜೆ ಘೋಷಿಸಿದೆ.
ಇದನ್ನೂ ಓದಿ : Karnataka New Schools : ಹೊಸ ಶಾಲೆಗಳಿಗೆ ಇನ್ನಿಲ್ಲದ ಬೇಡಿಕೆ: ಅನುಮತಿ ಕೋರಿ ಸಲ್ಲಿಕೆಯಾಗಿದೆ ಸಾವಿರಾರು ಅರ್ಜಿ
IMD Issued Heavy Rainfall Alert: Announced School Holiday In Udupi and Dakshina Kannada District