ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಲಾಕ್ ಡೌನ್ ಹೇರಿಕೆಯಿಂದ ಕಡಿಮೆಯಾಗಿದೆ. ಆದರೆ ರಾಜ್ಯದಲ್ಲಿ ಅವಸರದಲ್ಲಿ ಶಾಲೆಗಳನ್ನು ಆರಂಭ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ತೆರವು ಮಾಡುವ ಕುರಿರು ಆತುರ ಬೇಡ. ಹಂತ ಹಂತವಾಗಿ ತೆರವು ಮಾಡುವಂತೆ ಏಮ್ಸ್ ತಜ್ಞರು ತಿಳಿಸಿದ್ದಾರೆ. ಅಲ್ಲದೇ ಸದ್ಯಕ್ಕೆ ಶಾಲಾರಂಭ ಮಾಡುವುದು ಬೇಡ ಎಂದು ಏಮ್ಸ್ ಹೇಳಿದೆ.
ಇನ್ನು ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯವನ್ನು ಮಾಡುತ್ತಿದ್ದೇವೆ. ಲಸಿಕೆ ನೀಡಿ ಕಾಲೇಜು ಆರಂಭ ಮಾಡಲಾಗುತ್ತದೆ. ನಂತರದಲ್ಲಿ ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಲಸಿಕೆಯನ್ನು ನೀಡುವ ಕಾರ್ಯವನ್ನು ಮಾಡುತ್ತೇವೆ ಎಂದಿದ್ದಾರೆ.