NEET -2021 : ಇಂದಿನಿಂದ ನೀಟ್‌ ಪರೀಕ್ಷೆ : ಕೊರೊನಾ ಲಸಿಕೆ ಪಡೆದವರಿಗಷ್ಟೇ ಪರೀಕ್ಷೆಗೆ ಅವಕಾಶ

ನವದೆಹಲಿ : ದೇಶದಾದ್ಯಂತ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್‌ ಕೋರ್ಸ್‌ಗಳಿಗೆ ನೀಟ್‌ ಪರೀಕ್ಷೆ ನಡೆಯಲಿದೆ. ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಸರಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪರೀಕ್ಷೆಯನ್ನು ಬರೆಯುವವರು ಕಡ್ಡಾಯವಾಗಿ ಒಂದು ಡೋಸ್‌ ಕೊರೊನಾ ಲಸಿಕೆ ಪಡೆಯುವುದನ್ನು ಕಡ್ಡಾಯ ಗೊಳಿಸಲಾಗಿದೆ.

ದೇಶದ 201 ಪರೀಕ್ಷಾ ಕೇಂದ್ರ ಹಾಗೂ ಕರ್ನಾಟಕ ರಾಜ್ಯದ 9ಪರೀಕ್ಷಾ ಕೇಂದ್ರಗಳಲ್ಲಿ ಇಂದು ಮಧ್ಯಾಹ್ನ2 ಗಂಟೆಯಿಂದ 5 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿಗಳು ಕೊಠಡಿಯಲ್ಲಿ ಹಾಜರಿರುವುದನ್ನು ಕಡ್ಡಾಯಗೊಳಿಸಲಾಗಿದೆ.

ಈ ಬಾರಿ ಸುಮಾರು ಹದಿನಾರು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯನ್ನು ಮಾಡಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಶೂ, ಬ್ಯಾಗ್‌, ಪರ್ಸ್‌, ಪುಲ್‌ ಸ್ಲೀವ್‌ ಡ್ರೆಸ್‌, ವಾಚ್‌ ತರುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪೆನ್‌ ಅನ್ನು ಪರೀಕ್ಷಾ ಕೇಂದ್ರದಲ್ಲಿಯೇ ನೀಡಲಾಗುತ್ತದೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನಿಷ್ಠ ಒಂದು ಡೋಸ್‌ ಕೊರೊನಾ ಲಸಿಕೆಯನ್ನು ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದೊಮ್ಮೆ ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ರೆ, ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಸಿಇಟಿ ಪರೀಕ್ಷೆಗಾಗಿ ಈಗಾಗಲೇ ಸಲಕ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ ಕರ್ನಾಟಕದಲ್ಲಿ ಸಿಇಟಿ ಪರೀಕ್ಷೆ ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈ ನಡುವಲ್ಲೇ ಇಂದಿನಿಂದ ನೀಟ್‌ ಪರೀಕ್ಷೆ ಆರಂಭಗೊಂಡಿದೆ.

(NEET UG 2021 Today; Check NTA Guidelines On Admit Card, Dress Code)

Comments are closed.