ನವದೆಹಲಿ : ಈ ಹಿಂದೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಪಿಎಚ್ ಡಿ ಪಡೆಯೋದು ಕಡ್ಡಾಯವಾಗಿತ್ತು. ಆದರೆ ಈಗ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಪಿಎಚ್ ಡಿ ಕಡ್ಡಾಯವಲ್ಲ ಎಂಬ ನಿಂಬಂಧನೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಸ್ಪಷ್ಟನೆ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಪಿಎಚ್ ಡಿ ಕಡ್ಡಾಯವಲ್ಲ ಎಂಬ ನಿಂಬಂಧನೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ವಿಶ್ವವಿದ್ಯಾಲಯಗಳಿಗೆ ಅವಕಾಶ ನೀಡಲು ಕೊರೊನಾ ಹಿನ್ನೆಲೆಯಲ್ಲಿ ಈ ನಿಯಮ ಸಡಿಲಿಸಲಾಗಿದೆಯೆ ಹೊರತು ರದ್ದುಗೊಳಿಸಿಲ್ಲ ಎಂದು ಹೇಳಿದ್ದಾರೆ.
ಕೇಂದ್ರೀಯ ವಿವಿಗಳಲ್ಲಿ 10 ಸಾವಿರಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಉಳಿದಿವೆ. ಇವುಗಳನ್ನು ಶೀಘ್ರವೇ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್ ಡಿ ಪದವಿ ಕಡ್ಡಾಯ, ಆದರೆ ಕೊರೊನಾ ಕಾಲದಲ್ಲಿ ಅನೇಕ ಅಭ್ಯರ್ಥಿಗಳು ಪಿಎಚ್ ಡಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ.
ಹೀಗಾಗಿ ಪಿಎಚ್ ಡಿ ಕಡ್ಡಾಯ ಎಂಬ ಮಾನದಂಡವನ್ನು ಬದಲಿಸಲಾಗಿದೆ. ಆದರೆ ಸ್ನಾತಕೋತ್ತರ ಪದವಿ ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Metro Jobs : ಮೆಟ್ರೋದಲ್ಲಿದೆ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(Ph.D is not mandatory for appointment of lecturers: Ministry of Education)