SSLC Exams : ಜುಲೈ 19, 22 ರಂದು ಎಸ್ಎಸ್ಎಲ್ ಸಿ ಪರೀಕ್ಷೆ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನಲೆಯಲ್ಲಿ ಮುಂದೂಡಿಕೆಯಾಗಿದ್ದ ಎಸಎಸ್ಎಲ್ ಸಿ ಪರೀಕ್ಷೆ ಜುಲೈ 22 ರಿಂದ ನಡೆಯಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಹಾಗೂ ಡೆಲ್ಟಾ ಫ್ಲಸ್ ಸೋಂಕಿನ ನಡುವಲ್ಲೇ ಎಸ್ಎಸ್ಎಲ್ ಸಿ ಪರೀಕ್ಷೆ ಹಾಗೂ ಶಾಲಾರಂಭದ ಹಿನ್ನೆಲೆಯಲ್ಲಿ ಸಚಿವ ಸುರೇಶ್ ಕುಮಾರ್ ಅವರು ಜಿಲ್ಲಾಧಿಕಾರಿಗಳು, ಸಿಇಓಗಳು,  ಶಿಕ್ಷಣ ಇಲಾಖೆಯ ಸಚಿವರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದ್ದಾರೆ. ಸಭೆಯ ನಂತರ ಮಾತನಾಡಿದ ಅವರು, 8,76,581 ವಿದ್ಯಾರ್ಥಿಗಳು ಪರೀಕ್ದೆ ಬರೆಯಲಿದ್ದಾರೆ. ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ಅಧಿಕ ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ. 73,600ಪರೀಕ್ಷಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಕಳೆದ ಬಾರಿಗಿಂತ ಹೆಚ್ಚು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಅಲ್ಲದೇ ಪರೀಕ್ಷೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ನೀಡಿದೆ ಎಂದಿದ್ದಾರೆ.

ಪರೀಕ್ಷೆಯ ಸಿದ್ದತೆಗೆ ಸಂಬಂಧಿಸಿದಂತೆ ಎಲ್ಲಾ ಇಲಾಖೆ ಗಳ ಅಧಿಕಾರಿಗಳ ಸಭೆ ನಡೆಸಲಾಗಿದೆ. ಈ ಬಾರಿ ಎರಡು‌ ದಿನಗಳ ಕಾಲ‌ ಮಾತ್ರವೇ ಪರೀಕ್ಷೆ ಗಳು ನಡೆಯಲಿದೆ. ಎಲ್ಲಾ ಪ್ರಶ್ನೆ ಪತ್ರಿಗಳು ಕೂಡ ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಮಕ್ಕಳ ಸುರಕ್ಷೆಯ ಬಗ್ಗೆ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜುಲೈ 19 ರಂದು ಗಣಿತ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ ಪರೀಕ್ಷೆ, ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

ಕೊರೊನಾ ಸೋಂಕಿತ ಮಕ್ಕಳು ಪರೀಕ್ಷೆ ಬರೆಯಲು ಬಯಸಿದ್ರೆ ಅಂತವರಿಗೆ ಕೊರೊನಾ ಕೇಂದ್ರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಒಂದೊಮ್ಮೆ ಪರೀಕ್ಷೆ ಬರೆಯಲು ಸಾಧ್ಯವಾಗದೆ ಇರುವ ಮಕ್ಕಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ. ಇನ್ನು ಗಡಿ ಜಿಲ್ಲೆಗಳಲ್ಲಿ ಪರೀಕ್ಷೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಎನ್ 95 ಮಾಸ್ಕ್ ಬಳಕೆ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞರು ಸೂಚನೆಯನ್ನು ನೀಡಲಾಗಿದೆ. ಹೀಗಾಗಿ ಮಾಸ್ಕ್ ತರದೇ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಮಾತ್ರವೇ ಮಾಸ್ಕ್ ನೀಡಲಾಗುವುದು. ಆದರೆ ಸಿಬ್ಬಂಧಿಗಳು ಹಾಗೂ ಮೇಲ್ವಿಚಾರಕರು ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆಯಬೇಕು. ಪರೀಕ್ಷೆಯ ಬಗ್ಗೆ ಪೇಪರ್ ಲೀಕ್ ಬಗ್ಗೆ ಅಪಪ್ರಚಾರ ಮಾಡಿದ್ರೆ ಅಂತವರ ವಿರುದ್ದ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

Comments are closed.