PUC Result 2021: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಇಂದು 4.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಇಂದು ಸಂಜೆ 4.30 ಕ್ಕೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಹೀಗಾಗಿ ಅಂಕಗಳ ಮಾದರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಹೀಗಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ಈಗಾಗಲೇ ಅಂಕಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸ ಲಾಗಿದ್ದು, ಅಂತಿಮ ಫಲಿತಾಂಶ ನಾಳೆ ಹೊರಬೀಳಲಿದೆ.

ಇದನ್ನೂ ಓದಿ : PUC RESULT 2021 : ದಕ್ಷಿಣ ಕನ್ನಡ ಪ್ರಥಮ, ಬೆಂಗಳೂರು ದ್ವಿತೀಯ

ಇದನ್ನೂ ಓದಿ : ಕೊರೊನಾ ಬೆನ್ನಲ್ಲೇ ಚೀನಾದಲ್ಲಿ ಮಂಕಿ ಬಿ ವೈರಸ್‌ಗೆ ಮೊದಲ ಬಲಿ ..!!

ಈ ಬಾರಿ ಇಲಾಖೆ ಪ್ರಕಟಿಸುವ ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿರುವ ವಿದ್ಯಾರ್ಥಿಗಳು ಪ್ರತ್ಯೇಕ ವಾಗಿ ಪರೀಕ್ಷೆಯನ್ನು ಬರೆಯಲು ಅವಕಾಶವನ್ನು ಶಿಕ್ಷಣ ಇಲಾಖೆ ಕಲ್ಪಿಸಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ಸಿಇಟಿ ರಾಂಕ್‌ ಪ್ರಕಟಿಸುವಾಗ ಕೇವಲ ಸಿಇಟಿ ಅಂಕ ಗಳನ್ನು ಮಾತ್ರವೇ ಪರಿಗಣಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.

Comments are closed.