Karnataka 2nd PUC Result 2022 : ಜೂನ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ : 11,379 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ಬೆಂಗಳೂರು : ಹಿಜಾಬ್‌ ವಿವಾದದ ನಡುವಲ್ಲೇ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದೆ. ಒಂದೊಂದೆ ಪರೀಕ್ಷೆ ಮುಗಿಯುತ್ತಿದ್ದಂತೆಯೇ ಮೌಲ್ಯ ಮಾಪನವನ್ನು ನಡೆಸಲಾಗುತ್ತಿದೆ. ಈ ಬಾರಿ ಅತೀ ಕಡಿಮೆ ಅವಧಿಯಲ್ಲಿ ಮೌಲ್ಯ ಮಾಪನ ಕಾರ್ಯವನ್ನು ಮುಗಿಸಿ ಜೂನ್‌ ತಿಂಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು (Karnataka 2nd PUC Result 2022) ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ತಡವಾಗಿ ಆರಂಭಗೊಂಡಿದೆ. ಕಳೆದ ಎರಡು ವರ್ಷಗಳ ಕಾಲ ಪರೀಕ್ಷೆ ಕೊರೊನಾ ಸೋಂಕಿಗೆ ಬಲಿಯಾಗಿತ್ತು. ಆದ್ರೆ ಈ ಬಾರಿ ಪರೀಕ್ಷೆ ವಿಳಂಭವಾದ್ರೂ ಕೂಡ ಮೌಲ್ಯ ಮಾಪನ ಕಾರ್ಯವನ್ನು ವೇಗವಾಗಿ ಮುಗಿಸಲು ಇಲಾಖೆ ಸಜ್ಜಾಗಿದೆ. ಮೇ 20 ರಿಂದ ಜೂನ್‌ 15 ರ ಒಳಗೆ ಸಂಪೂರ್ಣ ಮೌಲ್ಯ ಮಾಪನ ಕಾರ್ಯವನ್ನು ಮುಗಿಸುವ ಫ್ಲ್ಯಾನ್‌ ಹಾಕಿಕೊಳ್ಳಲಾಗಿದೆ.

ಬೇಸಿಗೆ ರಜೆಯ ಅವಧಿಯಲ್ಲಿಯೂ ಉಪನ್ಯಾಸಕರನ್ನು ಮೌಲ್ಯ ಮಾಪನ ಕಾರ್ಯಕ್ಕೆ ಬಳಿಸಿಕೊಳ್ಳಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಈ ಬಾರಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಉಪನ್ಯಾಸಕರನ್ನು ಮೌಲ್ಯ ಮಾಪನ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಂಡಿದ್ದು, ಬರೋಬ್ಬರಿ ಹನ್ನೊಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಗೈರು ಹಾಜರಾಗಿದ್ದಾರೆ.

ಇದನ್ನೂ ಓದಿ : ಸಿಬಿಎಸ್‌ಇ ಪರೀಕ್ಷೆಗೆ ಎರಡನೇ ದಿನ ಬಾಕಿ, ಹೆಚ್ಚಿನ ಅಂಕಗಳಿಸಲು ಹೀಗೆ ಇರಲಿ ನಿಮ್ಮ ತಯಾರಿ

ಇದನ್ನೂ ಓದಿ : ಎಸ್‌ಎಸ್‌ಎಲ್‌ ಸಿ ಅಂಕಪಟ್ಟಿಯಲ್ಲಿ ಶಾಲೆಗಳ ಹೆಸರು ನಮೂದಿಸಿ : ಹೈಕೋರ್ಟ್‌ ಆದೇಶ

Karnataka 2nd PUC Result 2022 announce June Last week

Comments are closed.