ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 : ದಿನಾಂಕ ಘೋಷಿಸಿದ ಶಿಕ್ಷಣ ಸಚಿವ

ಬೆಂಗಳೂರು: ಕರ್ನಾಟಕ 2 ನೇ ಪಿಯುಸಿ 2023 ರ (Karnataka 2nd PUC Result 2023) ಪರೀಕ್ಷೆಯು ರಾಜ್ಯದಲ್ಲಿ ನಡೆಯುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಮುಂದಿನ ಉತ್ತಮ ಭವಿಷ್ಯಕ್ಕಾಗಿ ಹೆಚ್ಚಿನ ತಯಾರಿ ಮೂಲಕ ಪರೀಕ್ಷಗೆ ಭಾಗಿಯಾಗಿದ್ದಾರೆ. ಅದರಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಡಿಯಲ್ಲಿ ಮಾರ್ಚ್ 9, 2023 ರಿಂದ ಪ್ರಾರಂಭವಾಗಿದೆ. ವರದಿಗಳ ಪ್ರಕಾರ 2023 ರಲ್ಲಿ ಕರ್ನಾಟಕ 2 ನೇ ಪಿಯುಸಿ ಪರೀಕ್ಷೆಗೆ ಸುಮಾರು 126,195 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದೀಗ ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2023ರ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಕಳೆದ ವಾರ ನಡೆದ ಮಹತ್ವದ ಸಭೆಯ ಬಳಿಕ ಶಿಕ್ಷಣ ಸಚಿವರು ಮಾತನಾಡಿದರು. ಶಿಕ್ಷಣ ಸಚಿವರ ಸಭೆಯಲ್ಲಿ ಪರೀಕ್ಷೆ, ಮೌಲ್ಯಮಾಪನ ಪ್ರಕ್ರಿಯೆ ಮತ್ತು ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಸುಗಮವಾಗಿ ನಡೆಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚರ್ಚಿಸಿದರು. ‘ದ್ವಿತೀಯ ಪಿಯುಸಿ’ ಪರೀಕ್ಷೆ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಎಲ್ಲ ವಿಷಯಗಳಲ್ಲಿ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವ್ಯವಸ್ಥೆ ಮಾಡಿದ್ದೇವೆ. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು ಮತ್ತು ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, 726195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 5716 ಕಾಲೇಜುಗಳು ಮತ್ತು 1109 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 1109 ಸಹಾಯಕ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲೂಕು ಜಾಗೃತ ದಳ, 2373 ವಿಶೇಷ ಜಾಗೃತ ದಳ ಕರ್ತವ್ಯ ನಿರ್ವಹಿಸಲಿದೆ.

ಇದನ್ನೂ ಓದಿ : NEET MDS Score Card 2023 : ವೈದ್ಯಕೀಯ ಪ್ರವೇಶ ಪರೀಕ್ಷೆ ಅಂಕಪಟ್ಟಿ ನಾಳೆ ಬಿಡುಗಡೆ

ಇದನ್ನೂ ಓದಿ : GATE CoAP 2023 Registration: ಮೇ 20 ರಂದು ಮೊದಲ ಸುತ್ತಿನ ಸೀಟು ಹಂಚಿಕೆ

ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲರೂ ತಮ್ಮ ಕರ್ನಾಟಕ 2ನೇ ಪಿಯುಸಿ ಫಲಿತಾಂಶ 2022 ಅನ್ನು ಅಧಿಕೃತ ವೆಬ್‌ಸೈಟ್ karresults.nic.in ನಿಂದ ಅರ್ಜಿ ಪ್ರಕ್ರಿಯೆಯಲ್ಲಿ ಅವರಿಗೆ ನೀಡಿದ ರೋಲ್ ನಂಬರ್‌ನ್ನು ಭರ್ತಿ ಮಾಡುವ ಮೂಲಕ ಅಥವಾ ಫಲಿತಾಂಶಗಳು ಇಲಾಖೆಯಿಂದ ಬಿಡುಗಡೆಯಾದ ನಂತರ SMS ಮೂಲಕ ಪರಿಶೀಲಿಸಬಹುದು ಎಂದು ತಿಳಿಸಿದ್ದಾರೆ.

Karnataka 2nd PUC Result 2023 : Date Announced by Education Minister

Comments are closed.