Karnataka 2nd PUC Result : ಪಿಯುಸಿ ಫಲಿತಾಂಶ ಪ್ರಕಟ : ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ (Karnataka 2nd PUC Result ) ಪ್ರಕಟವಾಗಿದೆ. ಈ ಬಾರಿ ಈ ಬಾರಿ ದ್ವಿತೀಯ ಪಿಯುಸಿ ಪರಿಕ್ಷೆಗೆ ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ವಿದ್ಯಾರ್ಥಿಗಳು ತಮ್ಮ ರೋಲ್‌ ನಂಬರ್‌ ಅನುಸರಿಸಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಈ ಬಾರಿ ಶೇ. 61.88 ರಷ್ಟು ಫಲಿತಾಂಶ ಲಭ್ಯವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5,99,794 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಈ ಪೈಕಿ 4,02,697 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಕುರಿತು ಬೆಂಗಳೂರಿನ ಪಿಯು ಬೋರ್ಡ್‌ನಲ್ಲಿ ಸಚಿವ ಬಿ.ಸಿ.ನಾಗೇಶ್‌ ಸುದ್ದಿಗೋಷ್ಟಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ : ಒಟ್ಟು 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿಯರು ಶೇ.68.72 ಮತ್ತು ವಿದ್ಯಾರ್ಥಿಗಳು ಶೇ.55.22ರಷ್ಟು ಉತ್ತೀರ್ಣರಾಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

ದಕ್ಷಿಣ ಕನ್ನಡ ಫಸ್ಟ್​ , ಚಿತ್ರದುರ್ಗ ಲಾಸ್ಟ್​ : ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 88.02 ಪ್ರತಿಶತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಮೊದಲ ಸ್ಥಾನ ಪಡೆದಿದ್ದಾರೆ. ಎರಡನೇ ಸ್ಥಾನದಲ್ಲಿ ಉಡುಪಿ ಜಿಲ್ಲೆಯಿದೆ. ಕೊನೆಯ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆಯಿದ್ದು ಶೇಕಡಾ 49.31 ಪ್ರತಿಶತ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸಲು ಈ ವೆಬ್‌ಸೈಟ್‌ ಬಳಸಿ

karresults.nic.in, result.dk.pucpa.com , kseeb.kar.nic.in, pue.kar.nic.in

ಎಸ್‌ಎಂಎಸ್‌ ಮೂಲಕವೂ ಫಲಿತಾಂಶ

ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಸ್‌ಎಂಎಸ್‌ ಮೂಲಕವೂ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನಿಂದ KAR12Roll Number ಟೈಪ್‌ ಮಾಡಿ 56263 ಸಂಖ್ಯೆಗೆ SMS ಮಾಡುವ ಮೂಲಕ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯಬಹುದಾಗಿದೆ.

Karnataka 2nd PUC Result ಫಲಿತಾಂಶವನ್ನು ವೀಕ್ಷಿಸಲು ಈ ಮಾರ್ಗವನ್ನು ಅನುರಿಸಿ :

  • ಮೊದಲನೆಯದಾಗಿ, ಕರ್ನಾಟಕ ಪೂರ್ವ ವಿಶ್ವವಿದ್ಯಾಲಯದ ಇಲಾಖೆಯ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ವೆಬ್‌ಸೈಟ್‌ಗೆ ಭೇಟಿ ನೀಡಿದ ನಂತರ, ಪುಟದಲ್ಲಿ ಕೆಳಗೆ ಸ್ಕ್ರಾಲ್ ಮಾಡಿ ಮತ್ತು 2 ನೇ ಪಿಯುಸಿ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಮುಂದೆ, ನಿಮ್ಮನ್ನು ಇನ್ನೊಂದು ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
  • ಈ ಪುಟದಲ್ಲಿ, ನಿಮ್ಮ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕದಂತಹ ನಿಮ್ಮ ಮಾಹಿತಿಯನ್ನು ನೀವು ನಮೂದಿಸಬೇಕು.
  • ಅದರ ನಂತರ, ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
  • ನೀವು ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿದ ತಕ್ಷಣ, ಫಲಿತಾಂಶವು ನಿಮ್ಮ ಪರದೆಯ ಮೇಲೆ ಗೋಚರಿಸುತ್ತದೆ.
  • ಭವಿಷ್ಯದ ಉಲ್ಲೇಖಕ್ಕಾಗಿ ನೀವು ಫಲಿತಾಂಶವನ್ನು ನಿಮ್ಮ ಕಂಪ್ಯೂಟರ್‌ನಲ್ಲಿ ಉಳಿಸಬಹುದು ಮತ್ತು ಮುದ್ರಣವನ್ನು ಸಹ ತೆಗೆದುಕೊಳ್ಳಬಹುದು.
  • ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : PM Modi Visits Mother : ಪ್ರಧಾನಿ ಮೋದಿ ತಾಯಿಗೆ ನೂರರ ಸಂಭ್ರಮ : ತಾಯಿಯ ಆಶೀರ್ವಾದ ಪಡೆದ ‘ನಮೋ’

Karnataka 2nd PUC Result announce minister B CNagesh

Comments are closed.