5th, 8th, 9th class Board Exams cancelled: ಬೆಂಗಳೂರು : ಕರ್ನಾಟಕದಲ್ಲಿ ಈ ಬಾರಿಯಿಂದ ಜಾರಿಗೆ ತರಲು ಹೊರಟಿದ್ದ 5,8,9 11ನೇ ತರಗತಿಗೆ ಬೋರ್ಡ್ ಪರೀಕ್ಷೆ(Board Exams) ಯನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಪಬ್ಲಿಕ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ರುಪ್ಸಾ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಮೂರ್ತಿ ರವಿ ಹೊಸಮಂಜ ಅವರಿದ್ದ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ.

ರಾಜ್ಯ ಸರಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 5,8,9 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಆದೇಶ ಹೊರಡಿಸಿತ್ತು. ಅಲ್ಲದೇ ಈ ಕುರಿತು ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಆದರೆ ರಾಜ್ಯ ಸರಕಾರದ ಆದೇಶದ ವಿರುದ್ದ ರುಪ್ಸಾ ಆಕ್ಷೇಪ ವ್ಯಕ್ತಪಡಿಸಿದ್ದು, ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಕುರಿತು ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಮಹತ್ವದ ಆದೇಶವನ್ನು ಹೊರಡಿಸಿದೆ. 2023-24ನೇ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 5,8, 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ ನಡೆಸಲು ಸರಕಾರ ಆದೇಶಿಸಿದೆ.ಅಲ್ಲದೇ 11 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಈ ನಿರ್ಧಾರದ ಕುರಿತು ಅನುದಾನ ರಹತಿ ಶಾಲೆಗಳ ಸಂಘ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಜೊತೆಗೆ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟ ಕೂಡ ನ್ಯಾಯಾಲಯದ ಸರಕಾರ ನಿರ್ಧಾರವನ್ನು ವಿರೋಧಿಸಿತ್ತು.

ಇದನ್ನೂ ಓದಿ : ಅನುದಾನಿತ ಶಾಲಾ ಮಹಿಳಾ ಶಿಕ್ಷಕಿಯರಿಗೆ ಗುಡ್‌ನ್ಯೂಸ್ : ಶಿಶುಪಾಲನಾ ರಜೆ ಮಂಜೂರು ಮಾಡಿದ ಕರ್ನಾಟಕ ಸರಕಾರ
ಕರ್ನಾಟಕದಲ್ಲಿ ಮುಂದಿನ ವಾರದಿಂದಲೇ 5,8,9 ನೇ ತರಗತಿಗಳಿಗೆ ಬೋರ್ಟ್ ಪರೀಕ್ಷೆ ಆರಂಭವಾಗಲಿದ್ದು, ಈ ನಡುವಲ್ಲೇ ಹೈಕೋರ್ಟ್ ಆದೇಶ ಹೊರಬಿದ್ದಿದೆ. ಹೈಕೋರ್ಟ್ ಆದೇಶವನ್ನು ರೂಪ್ಸಾ ಸ್ವಾಗಿತಿದೆ. ಈ ಬಾರಿ ಕರ್ನಾಟಕ ಸರಕಾರ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬೋರ್ಡ್ ಪರೀಕ್ಷೆಗಳನ್ನು ನಡೆಸುವುದಾಗಿ ಘೋಷಣೆಯನ್ನು ಮಾಡಿತ್ತು.
ಇದನ್ನೂ ಓದಿ: ಶಾಲೆಗಳಿಗೆ ಸರಕಾರದ ಹೊಸ ರೂಲ್ಸ್ : ವಿದ್ಯಾಂಜಲಿ 2.0 ಪೋರ್ಟಲ್‌ನಲ್ಲಿ ನೋಂದಣಿ ಕಡ್ಡಾಯ
ಕಳೆದ ವರ್ಷವೇ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಸರಕಾರ ನಿರ್ಧಾರ ಮಾಡಿತ್ತು. ಅಲ್ಲದೇ ಈ ಕುರಿತು ಆದೇಶವನ್ನೂ ಹೊರಡಿಸಿತ್ತು. ಆದರೆ ಅಂತಿಮ ಹಂತದಲ್ಲಿ ಆಯಾಯ ಶಾಲೆಗಳಲ್ಲಿಯೇ ಮೌಲ್ಯಮಾಪನವನ್ನು ನಡೆಸಿತ್ತು. ಈ ಬಾರಿಯೂ ಸರಕಾರ ಬೋರ್ಡ್ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದು, ಹೈಕೋರ್ಟ್ ಪರೀಕ್ಷೆಯನ್ನೇ ರದ್ದು ಮಾಡಿ ಆದೇಶಿಸಿದೆ.
5th, 8th, 9th class Board Exams cancelled: High Court order