ಸೋಮವಾರ, ಏಪ್ರಿಲ್ 28, 2025
HomeeducationLKG Age Limit : ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯೋಮಿತಿ ಕಡ್ಡಾಯ

LKG Age Limit : ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯೋಮಿತಿ ಕಡ್ಡಾಯ

- Advertisement -

ಬೆಂಗಳೂರು : LKG Age Limit : ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಪೂರ್ವ ಪ್ರಾಥಮಿಕ ತರಗತಿಗಳ ಪ್ರವೇಶಾತಿಗೆ ವಯೋಮಿತಿಯನ್ನು ನಿಗದಿಪಡಿಸಿದೆ. ಶಿಕ್ಷಣ ಹಕ್ಕು ಕಾಯ್ದೆ 2005 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತೆ ಶೈಕ್ಷಣಿಕ ವರ್ಷ ಜೂನ್‌ 1 ಕ್ಕೆ ಅನ್ವಯವಾಗುವಂತೆ ಎಲ್‌ಕೆಜಿ ತರಗತಿಯ ಪ್ರವೇಶಕ್ಕೆ 4 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

2023-24 ನೇ ಸಾಲಿನಲ್ಲಿ ಎಲ್‌ಕೆಜಿ ತರಗತಿಗೆ ದಾಖಲಾತಿ ಹೊಂದಲು ಮಕ್ಕಳಿಗೆ ಕಡ್ಡಾಯವಾಗಿ ನಾಲ್ಕು ವರ್ಷ ವಯಸ್ಸಾಗಿರಬೇಕು. ಆದರೆ ಒಂದೇ ತರಗತಿಗೆ ಮಕ್ಕಳನ್ನು ದಾಖಲಿಸಲು 6 ವರ್ಷ ಪೂರ್ಣಗೊಂಡಿರಬೇಕು. ಒಂದನೇ ತರಗತಿಗೆ ಸೇರ್ಪಡೆ ವಯೋಮಿತಿ 2025-26 ನೇ ಸಾಲಿನಿಂದ ಅನ್ವಯವಾಗಲಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ಯೋಜನಾ ನಿರ್ದೇಶಕರು ಜ್ಞಾಪನಪತ್ರ ಹೊರಡಿಸಿದ್ದಾರೆ.

ಈ ಹಿಂದೆಯೇ ಶಿಕ್ಷಣ ಇಲಾಖೆ ಒಂದನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ನಿಗದಿ ಪಡಿಸಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಐದು ವರ್ಷ ಪೂರ್ಣಗೊಂಡಿರುವ ಮಕ್ಕಳು ಒಂದೇ ತರಗತಿಯ ಪ್ರವೇಶಕ್ಕೆ ಒಂದು ವರ್ಷ ಕಾಯಬೇಕಾಗುತ್ತದೆ. ಕೆಲವೊಂದು ಮಕ್ಕಳು 6.5 ತಿಂಗಳಲ್ಲಿ ಒಂದನೇ ತರಗತಿ ಪ್ರವೇಶ ಪಡೆಯುವುದು ಅವೈಜ್ಞಾನಿಕ ಎಂದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : SSLC Result 2023: ಎಸ್‌ಎಸ್‌ಎಲ್‌ಸಿ ಫಲಿತಾಂಶ ಯಾವಾಗ ಪ್ರಕಟ, ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ

ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್ : ರಜಾದಿನ ಹೆಚ್ಚಳ, ಶಾಲಾ ದಿನಗಳಲ್ಲಿ ಕಡಿತ

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲೆಗಳಿಗೆ ಈಗಾಗಲೇ ಬೇಸಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಮಕ್ಕಳು ತಮ್ಮ ಬೇಸಿಗೆ ರಜಾದಿನವನ್ನು ಬಹಳಷ್ಟು ಸಂಭ್ರಮದಿಂದ ಕಳೆಯುತ್ತಿದ್ದಾರೆ. ಈ ಸಂದರ್ಭದಲ್ಲೇ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಮುಂದಿನ ವರ್ಷ ಅಂದರೆ 2023-24ರ ಶೈಕ್ಷಣಿಕ ವರ್ಷದಲ್ಲಿ (karnataka Education Academic year 2023-24) ರಜಾಗಳನ್ನು ಹೆಚ್ಚಳ ಮಾಡಲಾಗಿದ್ದು, ಶಾಲಾ ದಿನಗಳಲ್ಲಿ ಕಡಿತ ಮಾಡಲಾಗಿದೆ. ಹೀಗಾಗಿ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೇವಲ 244 ದಿನಗಳ ಮಾತ್ರ ಶೈಕ್ಷಣಿಕ ಚಟುವಟಿಕೆಗಳು ನಡೆಯಲಿವೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಮಕ್ಕಳ ಶಾಲಾ ದಿನಗಳ ಸಂಖ್ಯೆಯನ್ನು 26 ದಿನಗಳು ಕಡಿತಗೊಳಿಸಿದೆ. ಹೀಗಾಗಿ ಈ ವರ್ಷ ಒಟ್ಟು 244 ಶಾಲಾ ದಿನಗಳು ಇರಲಿದ್ದು, ಇದರಲ್ಲಿ 180 ದಿನಗಳು ಮಾತ್ರ ಬೋಧನಾ ದಿನಗಳು ನಡೆಯಲಿವೆ ಎಂದು ಮಾರ್ಗಸೂಚಿಗಳು ತಿಳಿಸಿದೆ. ಕಳೆದ ವರ್ಷದಲ್ಲಿ ಹೆಚ್ಚುವರಿಯಾಗಿದ್ದ ಕಲಿಕಾ ಚೇತರಿಕೆ ಈ ವರ್ಷ ಇಲ್ಲದಿರುವುದು ಮತ್ತು ಈ ವರ್ಷ ದಸರಾ ರಜೆ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಶಾಲಾ ದಿನಗಳು ಕಡಿಮೆ ಆಗಿದೆ.

ಹಿಂದಿನ ವರ್ಷಕ್ಕೆ ಹೋಲಿಸಿದೆರೆ ಈ ಬಾರೀ ಶೈಕ್ಷಣಿಕ ಅವಧಿಯಲ್ಲಿ ಶಾಲಾ ಕರ್ತವ್ಯ ದಿನಗಳು ಭಾರೀ ಕಡಿತಗೊಂಡಿದೆ. ಅದೇ ರೀತಿ ಕಲಿಕಾ ದಿನಗಳಲ್ಲಿಯೂ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯವಾಗಿ, 48 ದಿನಗಳಷ್ಟು ಇಳಿಕೆ ಕಂಡು ಬಂದಿದೆ. 2022-23ರ ಶೈಕ್ಷಣಿಕ ವರ್ಷದಲ್ಲಿ 270 ಕರ್ತವ್ಯದ ದಿನಗಳಿದ್ದವು. ಈ ಮೂಲಕ ಹೆಚ್ಚುವರಿಯಾಗಿ 26 ರಜಾ ದಿನಗಳು ಈ ವರ್ಷ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಸಿಗಲಿದೆ. ಒಟ್ಟಾರೆಯಾಗಿ ಹಿಂದಿನ ವರ್ಷದ ಶೇ. 74ರಷ್ಟು ದಿನ ಶಿಕ್ಷಣ ಸಂಬಂಧಿ ಚಟುವಟಿಕೆ ನಡೆದಿದ್ದರೆ, ಈ ವರ್ಷ ಶೇ. 67ರಷ್ಟು ದಿನ ನಡೆಯಲಿದೆ.

ಕಳೆದ ಬಾರಿ ಕೋವಿಡ್ ಕಾರಣದಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಆಗಿರುವ ಹಿನ್ನಡೆಯನ್ನು ಸರಿದೂಗಿಸುವ ಸಲುವಾಗಿ ಮೇ ತಿಂಗಳ 14ರಿಂದ ಶಾಲಾ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿತ್ತು. ಹೀಗಾಗಿ ಹಿಂದಿನ ವರ್ಷ ಮೇ ತಿಂಗಳಲ್ಲಿ 14 ದಿನ ಕಲಿಕಾ ಕಾರ್ಯಕ್ರಮ ನಡೆಸಲಾಗಿತ್ತು. ಆದರೆ, ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯುವುದಿಲ್ಲ. ಮೇ 29ರಿಂದ ಶಾಲೆ ಆರಂಭಗೊಳ್ಳಲಿದ್ದು,ಶಾಲಾ ಮಕ್ಕಳಿಗೆ ಹೆಚ್ಚಿನ ದಿನಗಳು ಬೇಸಿಗೆ ರಜೆಯನ್ನು ತಮ್ಮ ಕುಟುಂಬದವರೊಂದಿಗೆ ಕಳೆಯಬಹುದಾಗಿದೆ.

2023-24ರ ಶೈಕ್ಷಣಿಕ ವರ್ಷದಲ್ಲಿ ದಸರಾ ರಜೆ ವಿವರ :
ಕಳೆದ ಶೈಕ್ಷಣಿಕ ವರ್ಷದಲ್ಲಿ ಅಕ್ಟೋಬರ್ 3ರಿಂದ 16ರ ವರೆಗೆ ಅಂದರೆ ಒಟ್ಟು 14 ದಿನ ಮಾತ್ರ ದಸರಾ ರಜೆ ನಿಗದಿ ಪಡಿಸಲಾಗಿತ್ತು. ಆದರೆ ಈ ವರ್ಷ ಅಕ್ಟೋಬರ್ 8ರಿಂದ 25ರ ವರೆಗೆ ಒಟ್ಟು 20 ದಿನ ರಜೆ ಇರಲಿದೆ. ಅದೇ ರೀತಿ ಕಳೆದ ವರ್ಷಕ್ಕೆ ಹೋಲಿಸಿದರೆ ಜೂನ್‌, ಜುಲೈಯಲ್ಲಿ ಒಂದು ದಿನ ಮತ್ತು ಡಿಸೆಂಬರ್‌ನಲ್ಲಿ ಮೂರು ರಜಾ ದಿನ ಹೆಚ್ಚಿದೆ.

2023-24ರ ಶೈಕ್ಷಣಿಕ ವರ್ಷದಲ್ಲಿ 180 ದಿನ ಮಾತ್ರ ಪಾಠ :
ಇನ್ನು ಕಳೆದ ಶೈಕ್ಷಣಿಕ ವರ್ಷದಲ್ಲಿ 228 ಬೋಧನಾ ಕಲಿಕೆ ದಿನಗಳಿದ್ದರೆ, ಈ ವರ್ಷ ಕೇವಲ 180 ಕಲಿಕಾ ದಿನಗಳಿರಲಿವೆ. ಈ ಶೈಕ್ಷಣಿಕ ವರ್ಷದಲ್ಲಿ 244 ಶಾಲಾ ಕರ್ತವ್ಯದ ದಿನಗಳನ್ನು ಸರ್ಕಾರ ನಿಗದಿ ಪಡಿಸಿದೆ. ಇದರಲ್ಲಿ ಬೋಧನಾ – ಕಲಿಕೆ ಪ್ರಕ್ರಿಯೆಗೆ ಕೇವಲ 180 ದಿನ ಉಳಿಯಲಿದೆ. ಉಳಿದಂತೆ ಪರೀಕ್ಷೆಗಳು ಮತ್ತು ಮೌಲ್ಯಾಂಕನ ಪ್ರಕ್ರಿಯೆಗಳಿಗಾಗಿ 26 ದಿನಗಳು, ಪಠ್ಯೇತರ ಚಟುವಟಿಕೆಗಳ / ಪಠ್ಯ ಚಟುವಟಿಕೆಗಳ/ ಸ್ಪರ್ಧೆಗಳ ನಿರ್ವಹಣೆ ಕಾರ್ಯಕ್ಕಾಗಿ 24 ದಿನಗಳು, ಮೌಲ್ಯಮಾಪನ ಮತ್ತು ಫ‌ಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನಗಳು ಮತ್ತು ಶಾಲಾ ಸ್ಥಳೀಯ ರಜೆಗಳು ಎಂದು ನಾಲ್ಕು ದಿನವನ್ನು ನಿಗದಿಪಡಿಸಲಾಗಿದೆ.ಹೀಗಾಗಿ ಈ ವರ್ಷದಲ್ಲಿ ಕೇವಲ 180 ಕಲಿಕಾ ದಿನಗಳಿರಲಿವೆ.

Karnataka Age Limit for Lkg Admission 4 years

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular