ಕರ್ನಾಟಕ ಬಂದ್‌ : ಸೆಪ್ಟೆಂಬರ್‌ 28, 29 ರಂದು 2 ದಿನ ಶಾಲೆ, ಕಾಲೇಜುಗಳಿಗೆ ರಜೆ !

ಕಾವೇರಿ ನದಿ ನೀರನ್ನು (Cauvery water Dispute )ತಮಿಳುನಾಡಿಗೆ (Tamil naadu) ಹರಿಸಿರುವುದನ್ನು ವಿರೋಧಿಸಿ ಸೆಪ್ಟೆಂಬರ್‌ 29 ರಂದು ಕರ್ನಾಟಕ ಬಂದ್‌ಗೆ (Karnataka Bandh)ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ 2 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ (2 days School College Holiday) ರಜೆ ಘೋಷಣೆಯಾಗುವ ಸಾಧ್ಯತೆಯಿದೆ.

ಬೆಂಗಳೂರು : ಕಾವೇರಿ ನದಿ ನೀರಿನ ವಿವಾದ (Cauvery water Dispute )ತಮಿಳುನಾಡಿಗೆ (Tamil naadu) ಹರಿಸಿರುವುದನ್ನು ವಿರೋಧಿಸಿ ನಡೆದ ಬೆಂಗಳೂರು ಬಂದ್‌ಗೆ (Bengaluru Bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವಲ್ಲೇ ಸೆಪ್ಟೆಂಬರ್‌ 29 ರಂದು ಕರ್ನಾಟಕ ಬಂದ್‌ಗೆ (Karnataka Bandh)ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ 2 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ (2 days School College Holiday)  ಘೋಷಣೆಯಾಗುವ ಸಾಧ್ಯತೆಯಿದೆ.

ಕನ್ನಡಪರ ಸಂಘಟನೆ, ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಸೆಪ್ಟೆಂಬರ್‌ 29 ರಂದು ಕರ್ನಾಟಕ ಬಂದ್‌ ನಡೆಸಲು ಮುಂದಾಗಿದೆ. ಕಾವೇರಿನ ನೀರು ತಮಿಳುನಾಡಿಗೆ ಹರಿಸುತ್ತಿರುವ ಹಿನ್ನೆಲೆಯಲ್ಲಿ ಬಂದ್‌ ತೀವ್ರ ಸ್ವರೂಪವನ್ನು ಪಡೆಯುವ ಸಾಧ್ಯತೆಯಿದೆ.

Karnataka Bandh 2 Days Holiday for Schools and Colleges on September 28 and 29
Image Credit to Original Source

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಅಲ್ಲದೇ ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ. ರಿಪಬ್ಲಿಕ್‌ನ್‌ ಪಾರ್ಟಿ ಆಫ್‌ ಇಂಡಿಯಾ, ಕನ್ನಡ ಜಾಗೃತಿ ವೇದಿಕೆ. ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಹಲವು ಸಂಘಟನೆಗಳು ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿಸಿವೆ.

ಇದನ್ನೂ ಓದಿ : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಶಿಕ್ಷಣ ನೀತಿ ರದ್ದು: ಸಿಎಂ ಸಿದ್ದರಾಮಯ್ಯ

ಕರ್ನಾಟಕ ಬಂದ್‌ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಮಲ್ಟಿಫ್ಲೆಕ್ಸ್‌ ಹಾಗೂ ಚಲನಚಿತ್ರ ಮಂದಿರಗಳಲ್ಲಿ ಯಾವುದೇ ಸಿನಿಮಾಗಳು ಪ್ರಸಾರವಾಗುವುದಿಲ್ಲ. ರಾಷ್ಟ್ರೀಯ ಹೆದ್ದಾರಿಗಳನ್ನು ಕೂಡ ಬಂದ್‌ ಮಾಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ಕೂಡ ಬಂದ್‌ ಮಾಡುವುದಾಗಿ ವಾಟಾಳ್‌ ನಾಗರಾಜ್‌ ಈ ಹಿಂದೆಯೇ ಘೋಷಣೆ ಮಾಡಿದ್ದಾರೆ.

ಕಾವೇರಿನ ನದಿ ನೀರಿ ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿತ್ತು. ಇದರಿಂದಾಗಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಕರ್ನಾಟಕ ಬಂದ್‌ ತೀವ್ರ ಸ್ವರೂಪ ಪಡೆಯುವ ಸಾಧ್ಯತೆಯಿದೆ.

Karnataka Bandh 2 Days Holiday for Schools and Colleges on September 28 and 29
Image Credit to Original Source

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಸೇರಿದಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ ಬಿಸಿ ಜೋರಾಗುವ ಸಾಧ್ಯತೆಯಿದೆ. ಅಲ್ಲದೇ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭಾಗದಲ್ಲಿಯೂ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ :ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿಗೆ ವರ್ಷದಲ್ಲಿ 3 ಬಾರಿ ಪರೀಕ್ಷೆ : ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

ಸೆಪ್ಟೆಂಬರ್‌ 28 ರಂದು ಈದ್‌ ಮಿಲಾದ್‌ ಹಿನ್ನೆಲೆಯಲ್ಲಿ ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್‌ 29 ರಂದು ಕರ್ನಾಟಕ ಬಂದ್‌ ನಡೆಯುವ ಹಿನ್ನೆಲೆಯಲ್ಲಿ 2 ದಿನಗಳ ಕಾಲ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆಯಾಗುವ ಸಾಧ್ಯತೆಯಿದೆ. ಆದರೆ ಇದುವರೆಗೂ ಕರ್ನಾಟಕ ಬಂದ್‌ಗೆ ಸಂಬಂಧಿಸಿದಂತೆ ಯಾವುದೇ ರಜೆ ಘೋಷಣೆ ಆಗಿಲ್ಲ.

ಶಾಲೆಗಳಲ್ಲಿ ಇದೀಗ ಮಧ್ಯವಾರ್ಷಿಕ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಸೆಪ್ಟೆಂಬರ್‌ 29 ರಂದು ಕರ್ನಾಟಕ ಬಂದ್‌ ನಡೆದ್ರೆ ಪರೀಕ್ಷೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಖಾಸಗಿ ಬಸ್‌ ಮಾಲೀಕರ ಒಕ್ಕೂಟ.

ಆಟೋ ಚಾಲಕರ ಒಕ್ಕೂಟ, ಟ್ಯಾಕ್ಸಿ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಘೋಷಿಸುವ ಸಾಧ್ಯತೆಯಿದೆ. ಖಾಸಗಿ ಬಸ್‌ ಸಂಚಾರ ಸಂಪೂರ್ಣವಾಗಿ ಬಂದ್‌ ಆದ್ರೆ, ಸರಕಾರಿ ಬಸ್‌ ಗಳು ಸಹಜವಾಗಿ ಸಂಚರಿಸುತ್ತವೆ ಅಂತಾ ಹೇಳೋದು ಕಷ್ಟ. ಈ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗೆ ತೆರಳಲು ಸಮಸ್ಯೆ ಆಗುವ ಸಾಧ್ಯತೆಯಿದೆ.

ಇದನ್ನೂ ಓದಿ : Sudha Murty : NCERT ಪಠ್ಯಪುಸ್ತಕ ಅಭಿವೃದ್ದಿ ಸಮಿತಿಗೆ ಸುಧಾಮೂರ್ತಿ, ಶಂಕರ್ ಮಹಾದೇವನ್ ಸೇರ್ಪಡೆ

ಕರ್ನಾಟಕ ಬಂದ್‌ಗೆ ಸಂಬಂಧಿಸಿದಂತೆ ನಾಳೆ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆಯಿದೆ. ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರ ಈ ಕುರಿತು ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆಯಿದೆ. ದಸರಾ ರಜೆ ಸಮೀಪಿಸುತ್ತಿರುವ ಹೊತ್ತಲ್ಲೇ ಶಾಲಾ ಮಕ್ಕಳಿಗೆ ಸಾಲು ಸಾಲು ರಜೆ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Comments are closed.