ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿಗೆ ವರ್ಷದಲ್ಲಿ 3 ಬಾರಿ ಪರೀಕ್ಷೆ : ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿಯೇ ಕರ್ನಾಟಕ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ( Education Minister Madhu Bangarappa) ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ಮುಂದೆ ಎಸ್‌ಎಸ್‌ಎಲ್‌ಸಿ (SSLC Exams 2024) ಹಾಗೂ ದ್ವಿತೀಯ ಪಿಯುಸಿ (PUC EXAMS) ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಬೆಂಗಳೂರು : ವಿದ್ಯಾರ್ಥಿಗಳಲ್ಲಿ ಕಲಿಕಾ ಚೇತರಿಕೆಯನ್ನು ಮಾಡುವ ಕಾರಣದಿಂದಾಗಿ ಎಸ್‌ಎಸ್‌ಎಲ್‌ಸಿ (SSLC Exams 2024) ಹಾಗೂ ದ್ವಿತೀಯ ಪಿಯುಸಿ (PUC EXAMS) ವಿದ್ಯಾರ್ಥಿಗಳಿಗೆ ವರ್ಷದಲ್ಲಿ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ( Education Minister Madhu Bangarappa) ಮಹತ್ವದ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆಯ (Teachers Day) ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಈ ಬಾರಿಯ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಪ್ರಾಥಮಿಕ ಶಿಕ್ಷಕರು, ಪ್ರೌಢಶಾಲಾ ಶಿಕ್ಷಕರು ಹಾಗೂ ಇಬ್ಬರು ವಿಶೇಷ ಶಿಕ್ಷಕರು ಸೇರಿದಂತೆ ಒಟ್ಟು 31 ಉತ್ತಮ ಶಿಕ್ಷಕರಿಗೆ ರಾಜ್ಯ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

Karnataka Big News SSLC PUC Exams 3 times in year says Education Minister Madhu Bangarappa in Teachers Days
Image Credit To Original Source

ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವರ್ಷದ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಹತ್ತನೆ ತರಗತಿಯಲ್ಲಿ ಮೂರು ಬಾರಿ ತೆಗೆದುಕೊಳ್ಳಬಹುದು. ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ಒಂದು ವರ್ಷವೂ ಕೂಡ ವ್ಯರ್ಥವಾಗ ಬಾರದು ಅನ್ನೋ ಕಾರಣಕ್ಕೆ ಮೂರು ಬಾರಿ ಪರೀಕ್ಷೆ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

Karnataka Big News SSLC PUC Exams 3 times in year says Education Minister Madhu Bangarappa in Teachers Days
Image Credit To Original Source

ವಿದ್ಯಾರ್ಥಿ ಜೀವನದಲ್ಲಿ ಯಾವುದೋ ಒಂದು ಕಾರಣಕ್ಕೆ ಆತ ಫೇಲ್‌ ಆದ್ರೆ ಆತನ ಇಡೀ ವರ್ಷ ವ್ಯರ್ಥವಾಗ ಬಾರದು. ಪರೀಕ್ಷೆಗಳನ್ನು ನಡೆಸುವುದು ವಿದ್ಯಾರ್ಥಿಗಳನ್ನು ಫೇಲ್‌ ಮಾಡುವುದಕ್ಕೆ ಅಲ್ಲ. ಜೀವನದ ಬಗ್ಗೆ ಕಲಿಕಯ ಮೌಲ್ಯ ಮಾಪನಕ್ಕಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಚೇತರಿಕೆಗಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಕೆಸಿಇಟಿ 2023ರ ಎರಡನೇ ಸುತ್ತಿನ ಕೌನ್ಸೆಲಿಂಗ್ ಫಲಿತಾಂಶ ಪ್ರಕಟ : ಇಲ್ಲಿದೆ ಪ್ರಮುಖ ಮಾಹಿತಿ

ರಾಜ್ಯದಲ್ಲಿ ಶಿಕ್ಷಕರ ವರ್ಗಾವಣೆಯ ಪ್ರಕ್ರಿಯೆ ನಂತರದಲ್ಲಿ ಕೆಲವೆಡೆ ಶಿಕ್ಷಕರ ಕೊರತೆ ಉಂಟಾಗಿತ್ತು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದ ಬಳಿಕ, ಅಂತಹ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಸದ್ಯ 43 ಸಾವಿರ ಮಂದಿ ಈಗ ಅತಿಥಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಸೆಪ್ಟೆಂಬರ್‌ನಲ್ಲಿ 8 ದಿನ ಶಾಲೆಗಳಿಗೆ ರಜೆ ಘೋಷಣೆ

ಸದ್ಯ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ನೀಡಬೇಕು ಅನ್ನುವ ಕಾರಣಕ್ಕೆ ರಾಜ್ಯದ ಸರಕಾರಿ, ಅನುದಾನಿತ ಶಾಲೆಗಳಲ್ಲಿ ವಾರಕ್ಕೆ ಒಂದು ಬಾರಿ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಆದರೆ ಇದೀಗ ಒಂದರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ವಾರಕ್ಕೆ ಎರಡು ಬಾರಿ ಮೊಟ್ಟೆಯನ್ನು ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸದ್ಯ ರಾಜ್ಯದಲ್ಲಿನ 58 ಲಕ್ಷ ಮಕ್ಕಳಿಗೆ ಇದೀಗ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಎರಡು ಬಾರಿ ಮೊಟ್ಟೆ ವಿತರಣೆ ಮಾಡುತ್ತಿದೆ ಎಂದಿದ್ದಾರೆ.

Karnataka Big News SSLC PUC Exams 3 times in year says Education Minister Madhu Bangarappa in Teachers Days

Comments are closed.