Karnataka CET 2022 : ಜೂನ್ 16 -18 ಸಿಇಟಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಪರೀಕ್ಷಾ ಕಾಲ ಸಮೀಪಿಸಿದೆ. ಕೊರೋನಾದಿಂದ ಬಾಗಿಲು ಮುಚ್ಚಿದ ಶಾಲಾ ಕಾಲೇಜುಗಳು ಬಾಗಿಲು ತೆರೆದು ಪಾಠ ಆರಂಭಿಸಿದ ಬಳಿಕ ಈಗ ಎಲ್ಲ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಬಳಿಕ ಇದೀಗ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಸಿಇಟಿಗೆ ರಾಜ್ಯ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ರಾಜ್ಯದಲ್ಲಿ ಜೂನ್ 16, 17, 18ರಂದು ಸಿಇಟಿ ಪರೀಕ್ಷೆ (CET 2022) ನಡೆಯಲಿದ್ದು ಈ ಬಗ್ಗೆ ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದಾರೆ.

ಇದೇ ಎಪ್ರಿಲ್‌ 05 ರಿಂದ CET-2022ರ ನೋಂದಣಿ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಬಳಿಕ ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ,17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ, 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ವಿವರಣೆ ನೀಡಿದ್ದಾರೆ.

ವಿದ್ಯಾರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿ ಪರೀಕ್ಷೆಗೆ ತಮ್ಮ ಹೆಸರು ನೋಂದಾಯಿಸ ಬಹುದಾಗಿದ್ದು, ಪ್ರತಿವರ್ಷದಂತೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಆನ್ಲೈನ್ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ.22ರವರೆಗೆ ಅವಕಾಶವಿದ್ದು, ಒಂದು ಸಲ ಸಲ್ಲಿಸಿದ ಮಾಹಿತಿ ಪರಿಷ್ಕರಿಸಲು ಮೇ 2ರಿಂದ 6ವರೆಗೆ ಕಾಲಾವಕಾಶ ನೀಡಲಾಗಿದೆ. ಇನ್ನೂ ಮೇ 30ರಿಂದ ಪ್ರವೇಶಪತ್ರಗಳನ್ನು ಡೌನ್’ಲೋಡ್ ಮಾಡಿಕೊಳ್ಳಲು ಅವಕಾಶವಿದ್ದು, ಜೂನ್ ೧೬ ರಂದ ಪರೀಕ್ಷೆ ಆರಂಭವಾಗಲಿದೆ. ವಿವಿಧ ಕಾರಣಗಳಿಂದಾಗಿ ನೀಟ್ ಪರೀಕ್ಷೆ (NEET) ವಿಳಂಬವಾಗಿದೆ. ಇದೇ ಕಾರಣ ಸಿಇಟಿಗೆ ಅರ್ಜಿ ಅಹ್ವಾನವು ತಡವಾಗಿದೆ ಎಂದು ಸಚಿವ ಅಶ್ವತ್ಥನಾರಾಯಣ ಇತ್ತೀಚೆಗೆ ಮಾಹಿತಿ ನೀಡಿದ್ದರು.

ಸಾಮಾನ್ಯವಾಗಿ ಜನವರಿಯಲ್ಲಿ ಸಿಇಟಿಗೆ ಅರ್ಜಿ ಆಹ್ವಾನಿಸಲಾಗುತ್ತಿತ್ತು ಆದರೆ ಕಳೆದ ಎರಡು ವರ್ಷಗಳ ಕೊರೋನಾ ಸಂಕಷ್ಟ ಹಾಗೂ ವಿವಿಧ ತಾಂತ್ರಿಕ ಕಾರಣದಿಂದಾಗಿ ಈ ಭಾರಿ ಸಿಇಟಿ ಪ್ರಕ್ರಿಯೆ ಕೂಡ ವಿಳಂಬ ಗೊಂಡಿದೆ. ಇದಲ್ಲದೇ ಉಕ್ರೇನ್ ರಷ್ಯಾ ಯುದ್ಧದಲ್ಲಿ ಹಾವೇರಿಯ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವಿನ ಬಳಿಕ ರಾಜ್ಯದಲ್ಲಿ ನೀಟ್ ಪರೀಕ್ಷೆ ಅವಾಂತರದ ಬಗ್ಗೆಯೂ ಚರ್ಚೆಗಳು ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆ ಕೂಡ ಅತ್ಯಂತ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ : ಒತ್ತಡಕ್ಕೆ ಒಳಗಾಗ ಬೇಡಿ : ಶಾಂತಿಯಿಂದ ಪರೀಕ್ಷೆ ಬರೆಯಿರಿ: ಮಕ್ಕಳಿಗೆ ಶಿಕ್ಷಣ ಸಚಿವರ ಮನವಿ

ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಹೃದಯಾಘಾತ

( Karnataka CET 2022 : Exam date announced, Check other details)

Comments are closed.