ನಾಳೆಯಿಂದ ರಾಜ್ಯದಲ್ಲಿ ಸಿಇಟಿ ಪರೀಕ್ಷೆ : ಹಿಜಾಬ್ ಗೆ ನೋ ಎಂಟ್ರಿ, ಈ ನಿಯಮ ಪಾಲಿಸಲೇ ಬೇಕು

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ವೃತ್ತಿಪರ ಕೋರ್ಸ್ ಗಳ ಸಿಇಟಿ ಪರೀಕ್ಷೆ (Karnataka CET Exam 2022) ನಡೆಯಲಿದ್ದು, ಇದೇ ಮೊದಲ ಬಾರಿಗೆ ನೀಟ್ ಮಾದರಿ ಯಲ್ಲಿ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ನಿಗದಿಯಾದಂತೆ ಜೂನ್ 16, 17, 18 ರಂದು 3 ದಿನ ನಡೆಯಲಿದ್ದು, ಸಿಇಟಿ ಪರೀಕ್ಷೆ ಈ ಬಾರಿ ನೀಟ್ ಮಾದರಿಯಲ್ಲಿ ಸಿಇಟಿ ಪರೀಕ್ಷೆ ನಡೆಸಲು ಸಿದ್ಧತೆ ನಡೆದಿದೆ.

ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡಿದ್ದು, ಸಿಇಟಿ ಪರೀಕ್ಷೆಯಿಂದಲೂ ಹಿಜಾಬ್ ಕಿಕ್ ಔಟ್ ಮಾಡಲಾಗಿದೆ. ಪರೀಕ್ಷೆಗೆ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಸಿಇಟಿ ಪರೀಕ್ಷೆಗೆ ಬರುವಂತಿಲ್ಲ , ಆಭರಣಗಳು ಧರಿಸುವಂತಿಲ್ಲ, ಮೊಬೈಲ್, ಬ್ಲೂಟೂಥ್, ಕೈಗಡಿಯಾರ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳಿಗೆ ನಿಷೇಧ ಹೇರಲಾಗಿದೆ.

ಈ ಬಾರಿ 2.11 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 1.4 ಲಕ್ಷ ಪುರುಷ ವಿದ್ಯಾರ್ಥಿಗಳು, 1.7 ಲಕ್ಷ ಮಹಿಳಾ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 486 ಕೇಂದ್ರಗಳು ಪರೀಕ್ಷೆಗೆ ಸಿದ್ಧಗೊಂಡಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲು ಸಿದ್ಧತೆ ನಡೆದಿದೆ.

ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನ ಮುಚ್ಚುವುದು ಕಡ್ಡಾಯ ಎಂದು ಆದೇಶಿಸಲಾಗಿದೆ. ಇನ್ನು ರಾಜ್ಯದಲ್ಲಿ ಸಿಇಟಿ ಪರೀಕ್ಷಾ ವೇಳಾಪಟ್ಟಿ ರಿಲೀಸ್ ಆಗಿದ್ದು,

  • 16-6-22ರಂದು-10.30 ರಿಂದ 11.30 – ಜೀವಶಾಸ್ತ್ರ
  • 16-6-22 ರಂದು 2.30 ರಿಂದ 3.30 -ಗಣಿತ
  • 17-6-22ರಂದು 10.30 ರಿಂದ 11.30- ಭೌತಶಾಸ್ತ್ರ
  • 17-6-22ರಂದ 2.30 ರಿಂದ 3.30-ರಸಾಯನಶಾಸ್ತ್ರ
  • 18-6-22ರಂದು-10.30 ರಿಂದ 11.30-ಹೊರನಾಡ ಕನ್ನಡಿಗರಿಗೆ, ಕನ್ನಡ ಪರೀಕ್ಷೆ ನಡೆಯಲಿದೆ.

ರಾಜ್ಯದ 486 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ 87 ಕೇಂದ್ರ, ಇತರೆ ಜಿಲ್ಲೆಗಳಲ್ಲಿ 399 ಕೇಂದ್ರಗಳ ನಿಗದಿಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರೀ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ‌ಮಾಡಿಕೊಂಡಿದ್ದಾರೆ. ಒಟ್ಟು 486 ವೀಕ್ಷಕರು, 972 ವಿಶೇಷ ಜಾಗೃತ ದಳದ ಸದಸ್ಯರ ನೇಮಕವಾಗಿದೆ. 486 ಪ್ರಶ್ನೆಪತ್ರಿಕೆ ಪಾಲಕರು, ಸುಮಾರು 9600 ಕೊಠಡಿ ಮೇಲ್ವಿಚಾರಕ ಹಾಗೂ ಒಟ್ಟಾರೆ 20,483 ಸಿಬ್ಬಂದಿಗಳು ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಇದನ್ನೂ ಓದಿ : Rohith Chakrathirtha : ರೋಹಿತ್ ಚಕ್ರತೀರ್ಥಗೆ ಭಾರಿ ಹಿನ್ನಡೆ : ಪಠ್ಯಪುಸ್ತಕ ಸಮಿತಿ ವಿಸರ್ಜಿಸಿದ ಸರ್ಕಾರ

ಇದನ್ನೂ ಓದಿ : Integrated coaching : ಇಂಟಿಗ್ರೇಟೆಡ್ ಕೋಚಿಂಗ್ ಹೆಸರಿನಲ್ಲಿ ಕಾಲೇಜುಗಳಿಂದ ಸುಲಿಗೆ : ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

Karnataka CET Exam 2022 : KEA issued new guidelines

Comments are closed.