School Close : ಕೊರೊನಾ 3ನೇ ಅಲೆ ಅಬ್ಬರ : ಶಾಲೆ ಸ್ಥಗಿತದ ಬಗ್ಗೆ ಶಿಕ್ಷಣ ಸಚಿವರ ಮಹತ್ವದ ಮಾಹಿತಿ

ದಾವಣಗೆರೆ : ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಬ್ಬ ವಿದ್ಯಾರ್ಥಿಗೆ ಜ್ವರ ಕಾಣಿಸಿಕೊಂಡಿತ್ತು. ಈ ವೇಳೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ 31 ವಿದ್ಯಾರ್ಥಿಗಳಿಗೆ ಕೊರೊನಾ ಲಕ್ಷಣ ಕಂಡು ಬಂದಿದೆ. ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಮೂರನೇ ಅಲೆ ಹೆಚ್ಚಾದರೆ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತು ಸಮಾಲೋಚನೆಯನ್ನು ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ ಎಂದಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 45000 ಶಾಲೆಗಳಿವೆ. ಆದರೆ ಒಂದು ಶಾಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆಯಾಗಿದೆ. ಶಾಲೆ ಆರಂಭವಾದ ಕಾರಣಕ್ಕೆ ಕೊರೊನಾ ಸೋಂಕು ಬಂದಿಲ್ಲ, ಪೋಷಕರಿಂದಲೂ ಸೋಂಕು ಬಂದಿರಬಹುದು. ಮಕ್ಕಳನ್ನು ಪಾನಿಪೂರಿ ತಿನ್ನನ್ನು, ಸಿನಿಮಾ ನೋಡೋದಕ್ಕೆ ಕರೆದುಕೊಂಡು ಹೋಗುತ್ತಾರೆ. ಯಾವುದೋ ಒಂದು ಶಾಲೆಯಲ್ಲಿ ಸೋಂಕು ಬಂದಿದೆ ಅನ್ನೋ ಕಾರಣಕ್ಕೆ ಎಲ್ಲೆಡೆಯಲ್ಲಿಯೂ ಇದೇ ಪರಿಸ್ಥಿತಿ ಇದೆ ಎಂದು ಬಿಂಬಿಸುವುದು ಬೇಡ ಎಂದಿದ್ದಾರೆ.

ಕೊರೊನಾ ಸೋಂಕು ಪತ್ತೆಯಾಗಿರುವ ನವೋದಯ ಶಾಲೆಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಸ್ಯಾನಿಟೈಟ್‌ ಮಾಡಿ ಮೂರು ದಿನಗಳ ನಂತರ ಶಾಲೆಯನ್ನು ಮತ್ತೆ ಆರಂಭ ಮಾಡುತ್ತೇವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ತೀರಾ ಕಡಿಮೆಯಿದೆ. ಕೊರೊನಾ ಬಗ್ಗೆ ಯಾರೂ ಭಯ ಪಡುವುದು ಬೇಡಾ, ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಅಗತ್ಯ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಮದನ್‌ ಗೋಪಾಲ್‌ ಅವರ ನೇತೃತ್ವದಲ್ಲಿ ಟಾಸ್ಕ್‌ ಪೋರ್ಸ್‌ ರಚನೆಯಾಗಿದೆ. ಶಿಕ್ಷಕರು ತರಬೇತಿಯನ್ನು ಮುಗಿಸಿದರೆ ಪಠ್ಯಕ್ರಮ ಪ್ರಾರಂಭಿಸಲಾಗುತ್ತದೆ. ಡಿಸೆಂಬರ್‌ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ನೂತನ ಶಿಕ್ಷಣ ನೀತಿ ಜಾರಿ ಮಾಡಲಾಗುವುದು ಎಂದಿದ್ದಾರೆ.

ಶಾಲಾ ಮಕ್ಕಳ ಪಠ್ಯ ಕಡಿತದ ಬಗ್ಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಕೇವಲ 35 ದಿನಗಳ ವಿಳಂಭವಾಗಿ ಶಾಲೆ ಆರಂಭವಾಗಿದೆ. ದಸರಾ ರಜೆಯ ಬೆನ್ನಲ್ಲೇ ಪೂರ್ಣ ಪ್ರಮಾಣದಲ್ಲಿ ಪಠ್ಯಕ್ರಮವನ್ನು ಬೋಧಿಸಲಾಗುತ್ತದೆ. ಇದಕ್ಕೆ ಶಿಕ್ಷಕರು ಸಜ್ಜಾಗಿದ್ದಾರೆ. ಮಕ್ಕಳಿಗೆ ಪಾಠ ಮಾಡಲು ಉತ್ಸುಕರಾಗಿದ್ದಾರೆ. ಪಠ್ಯ ಕಡಿತ ಮಾಡಿದ್ರೆ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಸಮಸ್ಯೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಶಾಲಾರಂಭದ ಬೆನ್ನಲ್ಲೇ ರಾಜ್ಯಕ್ಕೆ ಬಿಗ್‌ ಶಾಕ್‌ : ಒಂದೇ ಶಾಲೆಯ 21 ವಿದ್ಯಾರ್ಥಿಗಳಿಗೆ ಒಕ್ಕರಿಸಿದ ಕೊರೊನಾ

ಇದನ್ನೂ ಓದಿ : ಬಡ್ತಿ ಪಡೆಯಲು ಪರೀಕ್ಷೆ ಕಡ್ಡಾಯ : ಬಡ್ತಿ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಬಿಗ್‌ ಶಾಕ್‌

(Karnataka Corona 3rd wave: Education minister important information on school breakdown )

Comments are closed.