ಕೊರೊನಾ ನಡುವಲ್ಲೇ ರಾಜ್ಯದಲ್ಲಿ ಶಾಲೆ ಆರಂಭ : ಸಲಹೆ ಕೇಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಬಾರದೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಸಿದ್ದರಿಲ್ಲ. ಶಾಲಾರಂಭ ಮಾಡಲು ಪ್ಲ್ಯಾನ್ ರೂಪಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇದೀಗ ಶಾಲಾರಂಭದ ಕುರಿತು ಸಲಹೆ ನೀಡುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.

ಅನ್ ಲಾಕ್ ಪ್ರಕ್ರೀಯೆ ಆರಂಭಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಶಾಲೆಗಳು ಆರಂಭವಾಗುತ್ತೆ ಅಂತಾ ಹೇಳಲಾಗುತ್ತಿತ್ತು. ಅಲ್ಲದೇ ಸಪ್ಟೆಂಬರ್ 21ರಿಂದಲೇ 9ನೇ ತರಗತಿ ಮೇಲ್ಪಟ್ಟ ಮಕ್ಕಳು ಶಾಲೆಗೆ ಬಂದು ಪಾಠಕ್ಕೆ ಸಂಬಂಧಿಸಿದ ಅನುಮಾನಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಹೇಳಲಾಗಿತ್ತು. ಆದ್ರೆ ಕೊರೊನಾ ಸೋಂಕು ಹರಡುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಸಪ್ಟೆಂಬರ್ 30ರ ವರೆಗೆ ಯಾವುದೇ ವಿದ್ಯಾರ್ಥಿಗಳು ಶಾಲೆಗೆ ತೆರಳುವಂತಿಲ್ಲ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಇದೀಗ ಶಿಕ್ಷಣ ಸಚಿವರು ಶಾಲಾರಂಭದ ಕುರಿತಂತೆ ಜನಪ್ರತಿನಿಧಿಗಳ ಅಭಿಪ್ರಾಯವನ್ನು ಕೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ. ಸಂದಿಗ್ದ ಪರಿಸ್ಥಿತಿಯಲ್ಲಿ ಶಾಲೆಗಳ ಆರಂಭದ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಲೆಳನ್ನು ಯಾವಾಗ ಆರಂಭಿಸಬೇಕು. ಶಾಲಾರಂಭಕ್ಕೆ ಸಂಬಂಧಿಸಿದಂತೆ ಸಮುದಾಯ ಮತ್ತು ಜನಪ್ರತಿನಿಧಿಗಳಿಂದ ಯಾವ ರೀತಿಯ ಸಹಕಾರವನ್ನು ನಿರೀಕ್ಷಿಸಬಹುದು. ಈ ಕುರಿತಂತೆ ತಮ್ಮ ಸೂಚನೆಯನ್ನು ನೀಡುವಂತೆ ಸುರೇಶ್ ಕುಮಾರ್ ಅವರು ಜನಪ್ರತಿನಿಧಿಗಳಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಳೆದ ಮಾರ್ಚ್ ತಿಂಗಳಿನಿಂದಲೇ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚಲಾಗಿದ್ದು, ಇನ್ನೂ ಶಾಲೆಗಳನ್ನು ತೆರೆಯಲು ಸಾಧ್ಯವಾಗಿಲ್ಲ. ಕೆಳೆದ ಜೂನ್ ತಿಂಗಳಿನಲ್ಲಿಯೇ ಆರಂಭವಾಗಬೇಕಾಗಿದ್ದ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಮಕ್ಕಳು ಮನೆಯಲ್ಲಿಯೇ ಉಳಿದುಕೊಂಡಿರುವ ಮಕ್ಕಳಿಗೆ ವಿದ್ಯಾಗಮ ಹಾಗೂ ಟಿವಿ ಮೂಲಕ ಮಕ್ಕಳಿಗೆ ಪಾಠವನ್ನು ಬೋಧಿಸಲಾಗುತ್ತಿದೆ. ಆದರೆ ಮಕ್ಕಳಿಗೆ ಇದರಿಂದ ಸರಿಯಾದ ಶಿಕ್ಷಣ ಲಭಿಸುತ್ತಿಲ್ಲ. ಇನ್ನು ಮಕ್ಕಳು ಶಾಲೆಗಳಿಗೆ ತೆರಳದೇ ಇರುವುದರಿಂದಾಗಿ ಸಾಮಾಜಿಕ ಪಿಡುಗುಗಳ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವಲ್ಲೇ ರಾಜ್ಯದಲ್ಲಿ ಸಾಮಾಜಿಕ ಚಟುವಟಿಕೆಗಳು ಸಹಜ ಸ್ಥಿತಿಗೆ ಮರಳುತ್ತಿವೆ. ಆದರೆ ಶಾಲೆಗಳನ್ನು ಆರಂಭಿಸುವುದು ರಾಜ್ಯ ಸರಕಾರ ದೊಡ್ಡ ಸವಾಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಬಾರದ ಹೊರತು ಶಾಲೆಗಳನ್ನು ಆರಂಭಿಸುವುದೇ ಬೇಡಾ ಅಂತಾ ಹಲವು ಫೋಷಕರು ಹೇಳುತಿದ್ರೆ, ಇನ್ನೂ ಕೆಲವರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಶಾಲೆಗಳನ್ನು ಪುನರಾರಂಭ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಶಿಕ್ಷಣ ಇಲಾಖೆ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.

Leave A Reply

Your email address will not be published.