Teacher Transfer Counselling : ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ಶಿಕ್ಷಣ ಸಚಿವರಿಂದ ತಾತ್ಕಾಲಿಕ ತಡೆ

ಬೆಂಗಳೂರು : ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಗೆ (Teacher Transfer Counselling)ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಶಿಕ್ಷಣ ಇಲಾಖೆ ನಡೆಸುತ್ತಿರುವ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಸಾಕಷ್ಟು ನ್ಯೂನ್ಯತೆಗಳಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಸೂಚನೆಯನ್ನು ನೀಡಿದ್ದಾರೆ.

ಜನವರಿ ೨೪ ರಂದು ಕೌನ್ಸಿಲಿಂಗ್ ಮೂಲಕ ಹೆಚ್ಚುವರಿ ಶಿಕ್ಷಕರುಗಳಿಗೆ ಸ್ಥಳ ನಿಯುಕ್ತಿಗೊಳಿಸಲು ಕ್ರಮಕೈಗೊಳ್ಳಲಾಗಿತ್ತು. ಆದರೆ ಸದರಿ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷದಿಂದಾಗಿ ಹೆಚ್ಚುವರಿ ಶಿಕ್ಷಕರ ಪಟ್ಟಿಯಲ್ಲಿ ನ್ಯೂನ್ಯತೆಗಳಿದ್ದರೂ ಕೂಡ ಕೌನ್ಸಿಲಿಂಗ್ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಕೂಡಲೇ ತಡೆಹಿಡಿಯುವಂತೆ ಮತ್ತು ಇಂದಿನ ದಿನದ ಎಲ್ಲಾ ಪ್ರಕ್ರಿಯೆಯನ್ನು ರದ್ದುಪಡಿಸಲು ಕ್ರಮಕೈಗೊಳ್ಳಬೇಕು. ಅಲ್ಲದೇ ಮುಂದಿನ ಕೌನ್ಸಿಲಿಂಗ್ ಪ್ರಕ್ರಿಯೆಯ ಕುರಿತು ಪ್ರಸ್ತಾವನೆಯಲ್ಲಿ ಆದ್ಯತೆಯ ಮೇರೆಗೆ ಕಡತದಲ್ಲಿ ಮಂಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಶಿಕ್ಷಕರ ಮರುಹೊಂದಾಣಿಕೆ ಮುಂಬಡ್ತಿಯಲ್ಲಿ ಇರುವ ಗೊಂದಲ ಸರಿಪಡಿಸಿ ನಂತರ ಕೌನ್ಸಿಲಿಂಗ್ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಲ್ಲಿ ಮನವಿ ಮಾಡಲಾಗಿತ್ತು. ಅಲ್ಲದೇ ಶಿಕ್ಷಕರಿಗೆ ಆಗುತ್ತಿರುವ ತೊಂದರೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಅಂತಿಮವಾಗಿ ಶಿಕ್ಷಕರ ಕೌನ್ಸಿಲಿಂಗ್ ಅನ್ನು ಮುಂದೂಡಿಕೆ ಮಾಡಲಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮಾಹಿತಿ ನೀಡಿದ್ದಾರೆ.

ಇಂದಿನಿಂದ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್‌ ಪ್ರಕ್ರಿಯೆ ಆರಂಭವಾಗಬೇಕಾಗಿತ್ತು. ಶಿಕ್ಷಣ ಇಲಾಖೆಯ ಆಯುಕ್ತರು ಪಟ್ಟು ಹಿಡಿದು ಕೌನ್ಸಿಲಿಂಗ್‌ ಪ್ರಕ್ರಿಯೆ ಆರಂಭಿಸಿದ್ದರು ಅನ್ನೋ ಆರೋಪ ಕೇಳಿಬಂದಿತ್ತು. ಆದರೆ ಅಂತಿಮವಾಗಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಕೌನ್ಸಿಲಿಂಗ್ ಗೆ ತಾಕ್ಕಾಲಿಕ ಬ್ರೇಕ್ ನೀಡಿದ್ದಾರೆ.

ಇದನ್ನೂ ಓದಿ : ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ : Revival of govt school: ಮುಚ್ಚುತ್ತಿದ್ದ ಸರಕಾರಿ ಶಾಲೆಗೆ ಮರುಜೀವ: ವಾತಾವರಣವನ್ನೇ ಬದಲಾಯಿಸಿದ ಹಳೆ ವಿದ್ಯಾರ್ಥಿಗಳು

ಇದನ್ನೂ ಓದಿ : Age limit for 1st class enrollment: ಶಿಕ್ಷಣ ಇಲಾಖೆಯಿಂದ ಹೊಸ ರೂಲ್ಸ್ : 1ನೇ ತರಗತಿ ದಾಖಲಾತಿಗೆ ವಯೋಮಿತಿ ನಿಗದಿ

Karnataka Education Minister has issued a stay order for teacher transfer counselling

Comments are closed.