1ನೇ ತರಗತಿ ದಾಖಲಾತಿಗೆ ವಯೋಮಿತಿ ಹೆಚ್ಚಳ : ರಾಜ್ಯ ಸರಕಾರದ ಆದೇಶದಲ್ಲೇನಿದೆ ?

ಬೆಂಗಳೂರು : ಮಕ್ಕಳನ್ನು ಶಾಲೆಗೆ ದಾಖಲು ಮಾಡುವ ಕನಿಷ್ಠ ವಯೋಮಿತಿಗೆ ಸಂಬಂಧಿಸಿದಂತೆ (raises minimum age limit) ರಾಜ್ಯ ಸರಕಾರ ಹೊಸ ಆದೇಶವನ್ನು ಹೊರಡಿಸಿದೆ. ಹೊಸ ಆದೇಶ ಅನ್ವಯ 1ನೇ ತರಗತಿ ದಾಖಲಾತಿ ಪಡೆಯಬೇಕಾದ್ರೆ ಮಕ್ಕಳಿಗೆ ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು ಎಂದು ತಿಳಿಸಿದೆ.

ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಹೊರಡಿಸಿರುವ ಆದೇಶದ ಆರ್ ಟಿ ಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ 1 ರಂದು ಕಡ್ಡಾಯವಾಗಿ 6 ವರ್ಷ ಪೂರ್ಣಗೊಂಡಿರಬೇಕು. ಈ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಮಕ್ಕಳಿಗೆ 5.5 ವರ್ಷ ಆಗಿದ್ದರು ಕೂಡ ಪ್ರವೇಶಾವಕಾಶವನ್ನು ನೀಡಲಾಗುತ್ತಿತ್ತು. ಆದ್ರೀಗ ಕನಿಷ್ಠ ವಯೋಮಿತಿಯನ್ನು ಹೆಚ್ಚಳ ಮಾಡಲಾಗಿದ್ದು, ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರಬೇಕು.

Karnataka Government raises minimum age limit 6 years for admission to class 1

ರಾಜ್ಯ ಸರಕಾರ ಎಲ್‌ಕೆಜಿ, ಯುಕೆಜಿ ದಾಖಲಾತಿಗೆ ವಯಸ್ಸನ್ನು ನಿಗದಿ ಪಡಿಸಿತ್ತು. ಆಲ್ಲದೇ ಒಂದನೇ ತರಗತಿ ಪ್ರವೇಶಾವಕಾಶಕ್ಕೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ಮಾಡಲಾಗಿತ್ತು. ಈ ಕುರಿತು ಕಳೆದ ಎರಡು ವರ್ಷಗಳ ಹಿಂದೆಯೇ ಆದೇಶವೊಂದನ್ನು ಹೊರಡಿಸಲಾಗಿತ್ತು. ಹಳೆಯ ಆದೇಶವನ್ನು ರಾಜ್ಯ ಸರಕಾರ ರದ್ದುಗೊಳಿಸಿದೆ.

Karnataka Government raises minimum age limit 6 years for admission to class 1

ಇದನ್ನೂ ಓದಿ : karnataka cet : ಜುಲೈ 30ರಂದು ಸಿಇಟಿ ಫಲಿತಾಂಶ ಪ್ರಕಟ : ಸಚಿವ ಡಾ.ಸಿ.ಎನ್​ ಅಶ್ವತ್ಥ ನಾರಾಯಣ ಮಾಹಿತಿ

ಜುಲೈ 30ರಂದು ಸಿಇಟಿ ಫಲಿತಾಂಶ ಪ್ರಕಟ : ಸಚಿವ ಡಾ.ಸಿ.ಎನ್​ ಅಶ್ವತ್ಥ ನಾರಾಯಣ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ನಡೆದಿರುವ ಸಿಇಟಿ ಪರೀಕ್ಷೆಯ ಫಲಿತಾಂಶಗಳನ್ನು ಜುಲೈ 30ರಂದು ಪ್ರಕಟಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್​ ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ. ಜೂನ್​ ಮಧ್ಯ ವಾರದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ಇಂದು ಸಚಿವ ಡಾ.ಸಿ.ಎನ್​ ಅಶ್ವತ್ಥ ನಾರಾಯಣ ಫಲಿತಾಂಶ ಘೋಷಣೆಯ ದಿನಾಂಕವನ್ನು ಪ್ರಕಟಿಸಿದ್ದಾರೆ.

ಪರೀಕ್ಷಾ ಅಕ್ರಮಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಈ ಬಾರಿ ಸಿಇಟಿ ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಹಾಗೂ ಭದ್ರತೆಗಳ ಸಮೇತ ನಡೆಸಲಾಗಿತ್ತು. ಈ ಬಾರಿ ಸಿಬಿಎಸ್​ಇ ಹಾಗೂ ಐಸಿಎಸ್​ಇ ಪಠ್ಯ ಕ್ರಮದ ವಿದ್ಯಾರ್ಥಿಗಳಿಗೂ ಜೂನ್​ ಮಧ್ಯಭಾಗದಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನು ನೀಡಲಾಗಿತ್ತು. ವಿದ್ಯಾರ್ಥಿಗಳು ಜುಲೈ 26ರರ(ಮಂಗಳವಾರ) ಒಳಗಾಗಿ ತಮ್ಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ.

ಜೂನ್​ 16,17 ಹಾಗೂ 18ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ನಡೆಸಲಾಗಿತ್ತು.ಜುಲೈ 30ರಂದು ಪ್ರಕಟವಾಗುವ ಫಲಿತಾಂಶವನ್ನು ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​ kea.kar.nic.in ನಲ್ಲಿ ವೀಕ್ಷಿಸಬಹುದಾಗಿದೆ . ಇಂಜಿನಿಯರಿಂಗ್​ ಸೇರಿದಂತೆ ವಿವಿಧ ವೃತ್ತಿ ಪರ ಕೋರ್ಸ್​ಗಳಿಗೆ ಸಿಇಟಿ ಅಂಕ ಮುಖ್ಯವಾಗಿದೆ.

ಇದನ್ನೂ ಓದಿ : Coal India Recruitment 2022 : ಕೋಲ್ ಇಂಡಿಯಾ ಲಿಮಿಟೆಡ್ ನೇಮಕಾತಿ 2022 : ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಆಗಸ್ಟ್ 07 ಅರ್ಜಿ ಸಲ್ಲಿಸಲು ಕೊನೆಯ ದಿನ

Karnataka Government raises minimum age limit 6 years for admission to class 1

Comments are closed.