ಮಂಗಳವಾರ, ಏಪ್ರಿಲ್ 29, 2025
HomeeducationEngineering students : ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ಸರಕಾರ‌ : ಶೇಕಡಾ 10 ರಷ್ಟು...

Engineering students : ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ಸರಕಾರ‌ : ಶೇಕಡಾ 10 ರಷ್ಟು ಶುಲ್ಕ ಹೆಚ್ಚಳ

- Advertisement -

ಬೆಂಗಳೂರು : (Engineering students) ಕರ್ನಾಟಕದಲ್ಲಿ ಈಗಾಗಲೇ ವಿದ್ಯುತ್ ಮತ್ತು ನೀರಿನ ದರಗಳು ಸೇರಿದಂತೆ ಕೆಲವು ಅಗತ್ಯ ಬಳಕೆ ದರಗಳನ್ನು ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದ ಜನರು ದಿನನಿತ್ಯ ಜೀವನ ನಡೆಸುವುದು ಕಷ್ಟಕರವಾಗಲಿದೆ ಎಂದು ಬೆಚ್ಚಿಬಿದ್ದಿದ್ದಾರೆ. ಇದರ ಬಳಿಕ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಬಿಗ್ ಶಾಕ್ ಎಂಬಂತೆ ಇಂಜಿನಿಯರಿಂಗ್ ಸೀಟುಗಳ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ತಮ್ಮ ಉತ್ತಮ ಭವಿಷ್ಯಕ್ಕಾಗಿ ಕನಸು ಕಟ್ಟಿಕೊಂಡು ಇಂಜಿನಿಯರಿಂಗ್‌ ಮಾಡಬೇಕೆಂದು ಇರುವ ವಿದ್ಯಾರ್ಥಿಗಳಿಗೆ ಕಷ್ಟಕರವಾಗಿದೆ.

ನಿನ್ನೆಯಷ್ಟೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಫಲಿತಾಂಶ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರಕಾರಿ ಕೋಟಾ ಮತ್ತು ಕಾಮೆಡ್-ಕೆ ಕೋಟಾದ ಸೀಟುಗಳ ಪ್ರವೇಶ ಶುಲ್ಕವನ್ನು ಈ ವರ್ಷದಿಂದಲೇ ಪೂರ್ವಾನ್ವಯವಾಗುವಂತೆ ಶೇ.10ರಷ್ಟು ಹೆಚ್ಚಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ರಾಜ್ಯದ ವಿವಿಧ ಪದವಿಪೂರ್ವ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ CET ಅನ್ನು ನಡೆಸುತ್ತದೆ ಮತ್ತು ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (COMEDK) ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತದೆ. ಈ ಕುರಿತು ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಖಾಸಗಿ ಶಾಲೆಗಳಲ್ಲಿ ಸರಕಾರಿ ಕೋಟಾದ ಇಂಜಿನಿಯರಿಂಗ್ ಸೀಟುಗಳ ಶುಲ್ಕವನ್ನು ಶೇ.10ರಷ್ಟು ಹೆಚ್ಚಿಸಲಾಗಿದೆ.

ಇದನ್ನೂ ಓದಿ : KCET Results 2023 : ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ : ಇಂಜಿನಿಯರಿಂಗ್‌ ವಿಭಾಗದಲ್ಲಿ ವಿಘ್ನೇಶ್‌ ಅಗ್ರಸ್ಥಾನ

ಆದರೆ ಇದು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕೈಗೊಂಡ ನಿರ್ಧಾರವಲ್ಲ ಎನ್ನಲಾಗಿದೆ. ಈ ಹಿಂದಿನ ಬಿಜೆಪಿ ಸರಕಾರ ಇದನ್ನು ನಿರ್ಧರಿಸಿತ್ತು. ಅದನ್ನು ಈಗ ಜಾರಿಗೆ ತರಲಾಗುತ್ತಿದೆ ಎಂದರು.ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರಕಾರಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳ ಅನ್ವಯಿಸುತ್ತದೆ. ಇತರೆ ಯಾವುದೇ ವಿಧಾನದಿಂದ ಹೆಚ್ಚುವರಿ ಶುಲ್ಕ ಸಂಗ್ರಹಿಸುವ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಸ್ವಯಂ ಪ್ರೇರಿತವಾಗಿ ಬೆಂಬಲ ನೀಡುವುದಾಗಿ ಪ್ರತಿನಿಧಿಗಳು ಭರವಸೆ ನೀಡಿದ್ದಾರೆ.

Karnataka govt increased 10 percent fees for engineering students

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular