Karnataka Heavy Rainfall: ಕರ್ನಾಟಕದಲ್ಲಿ ಮಳೆ ಅಬ್ಬರ : ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: (Karnataka Heavy Rainfall) ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಬೆಂಗಳೂರಿನ ಶಾಲೆ, ಕಾಲೇಜುಗಳಿಗೆ ರಜೆ (school and college close today)ಘೋಷಣೆ ಮಾಡಲಾಗಿದೆ.

ನಿನ್ನೆಯಿಂದಲೂ ಬೆಂಗಳೂರಲ್ಲಿ ಮಳೆ ಸುರಿಯುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಶಾಲೆ, ಕಾಲೇಜುಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಅವರು ರಜೆ ಘೋಷಣೆ ಮಾಡಿದ್ದಾರೆ. ನಿನ್ನೆಯಿಂದಲೂ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಿಲಿಕಾನ್‌ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳು ಜಲಾವೃತವಾಗಿವೆ. ಅಲ್ಲದೇ ಸೋಮವಾರ ಹಲವು ಕಡೆಗಳಲ್ಲಿ ಬೃಹತ್‌ ಮರಗಳು ಧರೆಗೆ ಉರುಳಿ ಬಿದ್ದಿವೆ. ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆ ಮುಂದುವರೆಯುವ ನಿರೀಕ್ಷೆ ಇದೆ. ಭಾರೀ ಮಳೆಯ ಕಾರಣ ಶಾಲಾ ರಜೆ ಘೋಷಿಸಲಾಗಿದ್ದರೂ, ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿತ್ತು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಮನಗರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ನಗರದಲ್ಲಿನ ಬಕ್ಷಿ ಕೆರೆ ಒಡೆದ ಪರಿಣಾಮ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಯನ್ನು ಪರಿಶೀಲಿಸಿದರು. ಮುಖ್ಯಮಂತ್ರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಬಕ್ಷಿ ಕೆರೆಯ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಈ ನಗರಗಳು ಮಹಿಳೆಯರಿಗೆ ಸುರಕ್ಷಿತವಲ್ಲ NCRB

ಇದನ್ನೂ ಓದಿ: LPG ಗ್ರಾಹಕರಿಗೆ ಸಂತಸದ ಸುದ್ದಿ: 750 ರೂಪಾಯಿಗೆ ಪಡೆಯಿರಿ ಗ್ಯಾಸ್‌ ಸಿಲಿಂಡರ್‌

ಮುಖ್ಯಮಂತ್ರಿಯವರೊಂದಿಗೆ ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಮಾಜಿ ಸಿಎಂ ಹಾಗೂ ಚನ್ನಪಟ್ಟಣ ಶಾಸಕ ಹೆಚ್.ಡಿ.ಕುಮಾರಸ್ವಾಮಿ, ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.

Karnataka Heavy Rainfall: school and college close today

Comments are closed.