5-8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ಬೆಂಗಳೂರು ರಾಜ್ಯದಲ್ಲಿ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆ (Board Exams) ನಡೆಸಲು ಕರ್ನಾಟಕ ಹೈಕೋರ್ಟ್‌(Karnataka High court) ವಿಭಾಗೀಯ ಪೀಠ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಈ ಮೂಲಕ ಹೈಕೋರ್ಟ್‌ ಏಕಸದಸ್ಯ ಪೀಠ ನೀಡಿದ್ದ ಪರೀಕ್ಷೆಗೆ ತಡೆ ಆದೇಶವನ್ನು ರದ್ದುಗೊಳಿಸಿದೆ.

5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಕುರಿತು ವಿರೋಧ ವ್ಯಕ್ತವಾಗಿದ್ದು, ರುಪ್ಸಾ ಹೈಕೋರ್ಟ್‌ ಮೆಟ್ಟಿಲೇರಿತ್ತು. ಅಲ್ಲದೇ ಹೈಕೋರ್ಟ್‌ ಏಕಸದಸ್ಯ ಪೀಠ ((Karnataka High court)) ಪಬ್ಲಿಕ್‌ ಪರೀಕ್ಷೆಗೆ ತಡೆ ನೀಡಿ ಆದೇಶ ಹೊರಡಿಸಿತ್ತು. ಇದೀಗ ಪ್ರಕರದ ವಿಚಾರಣೆಯನ್ನು ನಡೆಸಿರುವ ಹೈಕೋರ್ಟ್‌ ವಿಭಾಗೀಯ ಪೀಠ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಗಳಿಗೆ ಪ್ರಮಾಣಪತ್ರವನ್ನು ಸಲ್ಲಿಸಲು ಸೂಚನೆ ನೀಡಿತ್ತು. ಇಂದು ವಿಚಾರಣೆಯನ್ನು ಪೂರ್ಣಗೊಳಿಸಿರುವ ಹೈಕೋರ್ಟ್‌ ಪರೀಕ್ಷೆಯನ್ನು ನಡೆಸಲು ಅನುಮತಿಯನ್ನು ನೀಡಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಈ ಬಾರಿ ಮಕ್ಕಳಲ್ಲಿ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಮೌಲ್ಯಾಂಕನ ಪರೀಕ್ಷೆಯನ್ನು ನಡೆಸಲು ಮುಂದಾಗಿತ್ತು. ಆದರೆ ಶಿಕ್ಷಣ ಇಲಾಖೆಯ ಕ್ರಮದ ವಿರುದ್ದ ವಿರೋಧ ವ್ಯಕ್ತವಾಗಿತ್ತು. ಇದೀಗ ಹೈಕೋರ್ಟ್‌ ವಿಭಾಗೀಯ ಪೀಠ ಪರೀಕ್ಷೆಗೆ ಗ್ರೀನ್‌ ಸಿಗ್ನಲ್‌ ನೀಡಿದ ಹಿನ್ನೆಲೆಯಲ್ಲಿ ಆಯಾಯ ಶಾಲೆಗಳಲ್ಲಿಯೇ ಪಬ್ಲಿಕ್‌ ಪರೀಕ್ಷೆ ನಡೆಯಲಿದೆ. ಆದರೆ ಪರೀಕ್ಷೆಯಲ್ಲಿ ಯಾರನ್ನೂ ಕೂಡ ಅನುತೀರ್ಣಗೊಳಿಸುವಂತಿಲ್ಲ. ಅಲ್ಲದೇ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ ಎಂದು ಆದೇಶದಲ್ಲಿ ಹೈಕೋರ್ಟ್‌ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

ಮಾರ್ಚ್‌ 27 ರಿಂದ ಪರೀಕ್ಷೆ ನಡೆಸಲು ಸೂಚನೆ ನೀಡಿದ್ದು, ಪಠ್ಯದಲ್ಲಿ ಉಲ್ಲೇಖಿಸಿರುವ ವಿಷಯಗಳನ್ನು ಹೊರತುಪಡಿಸಿ ಉಳಿದ ಪ್ರಶ್ನೆಗಳನ್ನು ಕೇಳುವಂತಿಲ್ಲ. ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸದೆ, ಫಲಿತಾಂಶವನ್ನು ಶಾಲೆಗೆ ಮಾತ್ರವೇ ತಲುಪಿಸಬೇಕು ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್‌ ಸೂಚಿಸಿದೆ.

ಇದನ್ನೂ ಓದಿ : KHB Recruitment 2023 : GIS ಸ್ಪೆಷಲಿಸ್ಟ್‌ ಹುದ್ದೆಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : H3N2 Risk In Children : ಮಕ್ಕಳೇ ಹೆಚ್ಚಾಗಿ H3N2 ವೈರಸ್ ಗೆ ತುತ್ತಾಗುತ್ತಿರುವುದ್ಯಾಕೆ ?

ಇದನ್ನೂ ಓದಿ : ಪ್ಯಾನ್‌ ಬಳಕೆದಾರರ ಗಮನಕ್ಕೆ : ಆಧಾರ್‌ – ಪ್ಯಾನ್‌ ಕಾರ್ಡ್‌ ಲಿಂಕ್‌ ಆಗದಿದ್ದರೆ ಏ.1ರಿಂದ 10000 ರೂ. ದಂಡ

Karnataka High court Green Signal for Board Exams for 5th and 8th class

Comments are closed.