Karnataka High Court: 15000 ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: (Karnataka High Court) ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ, ಪ್ರವೇಶ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಹೈಕೋರ್ಟ್ 15000 ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ, ಪ್ರವೇಶ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಪಟ್ಟಿಯನ್ನು ಈಗ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠ ರದ್ದುಗೊಳಿಸಿದೆ. ಸುಮಾರು 15000 ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಈ ಸಂಬಂಧ ನೂರಾರು ಅಭ್ಯರ್ಥಿಗಳು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ಪತಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಿ ಶಿಕ್ಷಣ ಇಲಾಖೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ ಎಂದು ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದು, ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ಇದು ಅಕ್ರಮವಾಗಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಾನೂನು ಬಾಹಿರ ಎಂದು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ತಂದೆಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ರದ್ದುಗೊಳಿಸಿದೆ.

ಇದನ್ನೂ ಓದಿ : BPSC Admit Card : BPSC ಪ್ರವೇಶ ಪತ್ರ ಬಿಡುಗಡೆ : ಕಾರ್ಡ್ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : Teacher Transfer Counselling : ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ : ಶಿಕ್ಷಣ ಸಚಿವರಿಂದ ತಾತ್ಕಾಲಿಕ ತಡೆ

ಇದನ್ನೂ ಓದಿ : ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

Karnataka High Court: Karnataka High Court quashed provisional selection list of 15000 primary school teachers

Comments are closed.