Hijab controversy college Leave : ಹಿಜಾಬ್‌, ಕೇಸರಿ ಸಂಘರ್ಷ : ಗಲಾಟೆ ಆದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ : ಸಚಿವ ಬಿ.ಸಿ.ನಾಗೇಶ್‌

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್‌ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಇದೀಗ ಶಾಲೆಗಳಲ್ಲಿ ಪರಿಸ್ಥಿತಿ ಕೈ ಮೀರುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಜಿಲ್ಲೆಗಳಲ್ಲಿನ ಕಾಲೇಜುಗಳಿಗೆ ಪರಿಸ್ಥಿತಿ ನೋಡಿಕೊಂಡು ಆಯಾಯ ಡಿಡಿಪಿಐಗಳು ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿ ರಜೆಯನ್ನು (Hijab controversy college Leave) ಘೋಷಣೆ ಮಾಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಶಾಲೆ, ಕಾಲೇಜುಗಳಿಗೆ ಹಾಜರಾಗುತ್ತಿದ್ದಾರೆ. ತರಗತಿಗಳು ಸರಿಯಾಗಿಯೇ ನಡೆಯುತ್ತಿದ್ದು, ಹಲವು ವಿದ್ಯಾರ್ಥಿಗಳು ಪರೀಕ್ಷೆಗೂ ಹಾಜರಾಗಿದ್ದಾರೆ. ಆದರೆ ಹಿಜಾಬ್‌ ವಿಚಾರದಲ್ಲಿ ಇದೀಗ ಗೊಂದಲ, ವಿವಾದ ಸೃಷ್ಟಿಯಾಗಿದೆ. ಪರಿಸ್ಥಿತಿಯನ್ನು ನೋಡಿಕೊಂಡು ಎರಡರಿಂದ ಮೂರು ದಿನಗಳ ಕಾಲ ಕಾಲೇಜುಗಳಿಗೆ ರಜೆಯನ್ನು ನೀಡುವಂತೆ ಡಿಡಿಪಿಐಗಳಿಗೆ ಸೂಚಿಸಲಾಗಿದೆ ಎಂದು ನಾಗೇಶ್‌ ಅವರು ತಿಳಿಸಿದ್ದಾರೆ.

ಶಾಲೆ, ಕಾಲೇಜುಗಳಲ್ಲಿನ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಲೇ ಬೇಕು. ನಾವೆಲ್ಲರೂ ಸಮಾನರು, ಅದಕ್ಕಾಗಿಯೇ ಸಮಾನವಾದ ಸಮವಸ್ತ್ರದಲ್ಲಿಯೇ ಶಾಲೆಗೆ ಹೋಗಬೇಕು. ಆದರೆ ಸಿಎಫ್‌ಐ ಹಾಗೂ ಎಸ್‌ಡಿಪಿಐನಂತಹ ಸಂಘಟನೆಗಳು ಹಿಜಾಬ್‌ ವಿಚಾರದಲ್ಲಿ ಪ್ರಚೋದನೆ ನೀಡುತ್ತಿವೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಶಾಲೆ ಹಾಗೂ ಕಾಲೇಜುಗಳಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ. ಆದರೂ ಕೂಡ ಕಾಲೇಜುಗಳಲ್ಲಿ ಕೇಸರಿ ಹಾಗೂ ಹಿಜಾಬ್‌ ವಿವಾದ ತಾರಕಕ್ಕೇರಿದೆ. ಈ ನಡುವಲ್ಲೇ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಪೇಟ ಕೊಟ್ಟು ಕಾಲೇಜಿಗೆ ಹಾಜರಾಗುತ್ತಿದ್ದಂತೆಯೇ ಕಾಲೇಜಿನಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆಯಲ್ಲಿ ಶಿವಮೊಗ್ಗದಲ್ಲಿಯೂ ಕೇಸರಿ ಹಾಗೂ ಹಿಜಾಬ್‌ ವಿವಾದ ತಾರಕಕ್ಕೇರುತ್ತಿದ್ದಂತೆಯೇ ಸುಮಾರು ಆರು ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ದಿನೇ ದಿನೇ ಪರಿಸ್ಥಿತಿ ಹದಗೆಡುತ್ತಿದೆ. ಆದರೆ ರಾಜ್ಯದ ಶಿಕ್ಷಣ ಸಚಿವರು ಮಾತ್ರ ಏನೂ ಆಗಿಲ್ಲ ಅನ್ನುವಂತೆ ವರ್ತಿಸುತ್ತಿದ್ದಾರೆ. ಕೆಲವೇ ಕೆಲವು ವಿದ್ಯಾರ್ಥಿಗಳಿಂದಾಗಿ ಇದೀಗ ವಿದ್ಯಾರ್ಥಿ ಸಮೂಹವೇ ಸಂಕಷ್ಟಕ್ಕೆ ಸಿಲುಕಿದೆ. ರಾಜ್ಯ ಸರಕಾರ ಹಾಗೂ ಶಿಕ್ಷಣ ಸಚಿವರು ಗೊಂದಲ ಪರಿಹಾರಕ್ಕಾಗಿ ಮುಂದಾಗಲೇ ಬೇಕಾದ ಅನಿವಾರ್ಯತೆಯಿದೆ.

ಇದನ್ನೂ ಓದಿ : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗೆ ದಿನಾಂಕ ನಿಗದಿ

ಇದನ್ನೂ ಓದಿ : ಶಿವಮೊಗ್ಗದಲ್ಲೂ ತಾರಕ್ಕೇರಿದ ಕೇಸರಿ-ಹಿಜಾಬ್​ ಗಲಾಟೆ : ಕಲ್ಲು ತೂರಾಟ ನಡೆಸಿ ಆಕ್ರೋಶ

( Hijab controversy college Leave : announcement of leave for disturbed schools and Colleges Minister B Nagesh)

Comments are closed.