Good News : ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ಮಧ್ಯಾಹ್ನದ ಬಿಸಿಯೂಟಕ್ಕೆ ಸಿರಿಧಾನ್ಯ

ಚಿತ್ರದುರ್ಗ : ರಾಜ್ಯದಲ್ಲಿ ಈಗಾಗಲೇ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಂಡಿವೆ. ಮಕ್ಕಳ ಅನುಕೂಲಕ್ಕಾಗಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ನಡುವಲ್ಲೇ ಕೃಷಿ ಸಚಿವರು ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದು, ಇನ್ಮುಂದೆ ಮಧ್ಯಾಹ್ನದ ಬಿಸಿಯೂಟಕ್ಕೆ ಸಿರಿಧಾನ್ಯ ನೀಡುವುದಾಗಿ ಘೋಷಣೆಯನ್ನು ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ಶಿವ ಸಂಚಾರ ನಾಟಕೋತ್ಸವದ ಬೆಳ್ಳಿಹಬ್ಬದ ಸಮಾರಮಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ೨೦೨೩ಕ್ಕೆ ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮೇಳ ಏರ್ಪಡಿಸಲಾಗುವುದು ಎಂದಿದ್ದಾರೆ. ರಾಜ್ಯದಲ್ಲಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಸಿರಿಧಾನ್ಯಗಳನ್ನು ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ.

ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಬರಬೇಕು, ಸಾವಯವ ಕೃಷಿ ಅವಶ್ಯಕವಾಗಿದ್ದು, ರೈತರಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯ ಸರಕಾರ ಉತ್ಪಾದಕ ಸಂಸ್ಥೆಯನ್ನು ಸ್ಥಾಪನೆ ಮಾಡಲಿದೆ ಎಂದಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಅನುಕೂಲಕ್ಕಾಗಿ ಆತ್ಮನಿರ್ಭರ ಭಾರತ ಯೋಜನೆಯ ಅಡಿಯಲ್ಲಿ 10 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿನ ಶಾಲೆಗಳಲ್ಲಿ ಈಗಾಗಲೇ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಆರಂಭಿಸಲಾಗಿದೆ. ಇದರಿಂದಾಗಿ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನುಕೂಲವಾಗಿತ್ತು. ಇದೀಗ ಬಿಸಿಯೂಟಕ್ಕೆ ಸಿರಿಧಾನ್ಯಗಳನ್ನು ನೀಡಿದ್ರೆ, ಮಕ್ಕಳ ಆರೋಗ್ಯದ ಮಟ್ಟವೂ ವೃದ್ದಿಯಾಗಲಿದೆ ಅನ್ನೋದು ಸರಕಾರ ಲೆಕ್ಕಾಚಾರ.

ಇದನ್ನೂ ಓದಿ : KSET ಪರೀಕ್ಷೆ ಫಲಿತಾಂಶ ಪ್ರಕಟ : ಸಹಾಯಕ ಉಪನ್ಯಾಸ ಹುದ್ದೆಗೆ ಅರ್ಹತೆ ಪಡೆದ 4779 ಮಂದಿ

ಇದನ್ನೂ ಓದಿ : ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹಕ್ಕೆ ಹೊಸ ಶಿಷ್ಯ ವೇತನ : ರಾಜ್ಯ ಸರ್ಕಾರದ ಆದೇಶ

(Millet for midday meals Karnataka School students : BC Patil )

Comments are closed.