ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳ ಆರಂಭ : ಸ್ಪಷ್ಟೀಕರಣ‌ ಕೊಟ್ಟ ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು‌ : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವಲ್ಲೇ ರಾಜ್ಯದಲ್ಲಿ 1ರಿಂದ 5 ನೇ ತರಗತಿ ಆರಂಭಿಸುವ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಹತ್ವದ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಪ್ರಾಥಮಿಕ ಶಾಲೆಗಳನ್ನು ತೆರೆಯುವುದಿಲ್ಲ ಎಂದಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಸದ್ಯ ಪ್ರಾಥಮಿಕ ಶಾಲೆ ಆರಂಭದ ಚಿಂತನೆಯೇ ಇಲ್ಲ. ಕೇರಳದಲ್ಲಿ ಕೊರೊನಾ ಏರಿಕೆ ಹಾಗೂ ಅಲ್ಲಿನ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸದ್ಯ 6 ರಿಂದ ಟ್ರಯಲ್ ಮಾಡುತ್ತಾ ಇದ್ದೀವಿ ಅಷ್ಟೇ. ಪ್ರಾಥಮಿಕ ಶಾಲೆಗಳಾದ 1 ರಿಂದ 5 ರವರೆಗೆ ತೆರೆಯಲು ಚಿಂತನೆ ಇಲ್ಲ ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸದ್ಯಕ್ಕೆ 1ರಿಂದ 5ನೆ ತರಗತಿಯವರೆಗೆ ಶಾಲೆ ಆರಂಭ ಮಾಡದಿರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸರಕಾರದ ಮುಂದೆ ಸದ್ಯ ಅಂತಹ ಯಾವುದೇ ಆಲೋಚನೆ ಗಳಿಲ್ಲ ಎಂದಿದ್ದಾರೆ. ಅದ್ರಲ್ಲೂ ಪಾಸಿಟಿವಿ ದರ ಶೇ.2 ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರವೇ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದಿದ್ದಾರೆ.

ರಾಜ್ಯದ 2913 ಗ್ರಾಮ ಪಂಚಾಯತ್ ಗಳಲ್ಲಿ ಕೊವಿಡ್ ಪಾಸಿಟಿವಿಟಿ ಶೂನ್ಯವಿದೆ. 6472 ಮಕ್ಕಳ ಕೊವಿಡ್ ಸ್ಯಾಂಪಲ್​ಗಳಲ್ಲಿ 12 ಮಕ್ಕಳಲ್ಲಿ ಮಾತ್ರ ಕೊವಿಡ್ ಪಾಸಿಟಿವ್ ಬಂದಿದೆ. ಆದರೂ ಕಿರಿಯ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದಿದ್ದಾರೆ.

(1-5 class start clarification health minister karnataka)

Comments are closed.