PUC Result : ನಾಳೆ (ಸೆ. 20 ) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಕೊರೊನಾ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಆದರೆ ಖಾಸಗಿಯಾಗಿ ಪರೀಕ್ಷೆ ಬರೆದವರು ಹಾಗೂ ಫಲಿತಾಂಶವನ್ನು ತಿರಸ್ಕರಿಸಿದವರಿಗಾಗಿ ನಡೆದ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಸಪ್ಟೆಂಬರ್‌ 20 ರಂದು ಬೆಳಿಗ್ಗೆ 10.30ಕ್ಕೆ ಫಲಿತಾಂಶ ಪ್ರಕಟಿಸಲು ಇಲಾಖೆ ಸಿದ್ದತೆ ಮಾಡಿಕೊಂಡಿದೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿರಲಿಲ್ಲ. ಹೀಗಾಗಿ ಎಸ್‌ಎಸ್‌ಎಲ್‌ ಇ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರ ಮೇಲೆ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಈ ವೇಳೆಯಲ್ಲಿ ಖಾಸಗಿ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ಕೋರ್ಟ್‌ ಮೆಟ್ಟಿಲೇರಿದ್ದರು. ಜೊತೆಗೆ ಹಲವು ವಿದ್ಯಾರ್ಥಿಗಳು ಇಲಾಖೆಯ ಫಲಿತಾಂಶವನ್ನು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಪರೀಕ್ಷಾ ಮಂಡಳಿ ಇಂತಹ ವಿದ್ಯಾರ್ಥಿಗಳಿಗಾಗಿ ಪರೀಕ್ಷೆಯನ್ನು ನಡೆಸಿದೆ. ಈಗಾಗಲೇ ಮೌಲ್ಯಮಾಪನವನ್ನು ಮುಕ್ತಾಯಗೊಳಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ದ್ವಿತೀಯ ಪಿಯಸಿ ಫಲಿತಾಂಶ ಪ್ರಕಟಿಸುವ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನಿಇಲಾಖೆಯ ಅಧಿಕೃತ ವೆಬ್‌ಸೈಟ್‌ http://karresults.nic.in ಲಿಂಕ್ ನ ಮೂಲಕ ಪಡೆಯಬಹುದಾಗಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಸಿಇಟಿ, ಎನ್ಇಇಟಿ, ನೀಟ್ ಪರೀಕ್ಷೆಗೆ ಆ್ಯಪ್ ಟ್ರೈನಿಂಗ್

ಇದನ್ನೂ ಓದಿ : ಪಿಯುಸಿಯಲ್ಲಿ ಫೇಲ್ ಆದವರಿಗೂ ಗುಡ್ ನ್ಯೂಸ್ : ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್..!!

( Karnataka 2nd PUC announce tomorrow (September 20)

Comments are closed.