ಚಿಕ್ಕಬಳ್ಳಾಪುರ : ಶಿಕ್ಷಕರ ನೇಮಕದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಸರಕಾರ ಗುಡ್‌ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಶೀಘ್ರದಲ್ಲಿಯೇ ಐದು ಸಾವಿರ ಶಿಕ್ಷಕರನ್ನು ಟಿಇಟಿ ಹಾಗೂ ಸಿಇಟಿ ಮೂಲಕ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ಅಗಲಗುರ್ಕಿಯ ಬಿ.ಜಿ.ಎಸ್.ವಿಜ್ಞಾನ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 13 ಸಾವಿರ ಶಿಕ್ಷಕರ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಈ ಹಿಂದಿನ ಸಚಿವರಾಗಿದ್ದ ಸುರೇಶ್ ಕುಮಾರ್ ಅವರು ಸುಮಾರು 10 ಸಾವಿರ ಶಿಕ್ಷಕರ ನೇಮಕ ಮಾಡಲು ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದರು. ಈ ಪೈಕಿ ಸುಮಾರು 3 ಸಾವಿರ ಶಿಕ್ಷಕರು ಅರ್ಹತೆಯನ್ನು ಪಡೆದುಕೊಂಡಿದ್ದಾರೆ ಎಂದಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವಿಳಂಭವಾಗಿತ್ತು. ಆದ್ರೀಗ 5 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರಕಾರ ಮುಂದಾಗಿದ್ದು, ಶೀಘ್ರ ದಲ್ಲಿಯೇ ಶಿಕ್ಷಕರ ನೇಮಕ ಮಾಡುವ ಮೂಲಕ ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಕಾರ್ಯವನ್ನು ಮಾಡುತ್ತೇವೆ ಎಂದಿದ್ದಾರೆ.
ಇದನ್ನೂ ಓದಿ : ದಕ್ಷಿಣ ಕನ್ನಡದಲ್ಲಿ ಶಾಲಾರಂಭಕ್ಕೆ ಗ್ರೀನ್‌ಸಿಗ್ನಲ್
ಇದನ್ನೂ ಓದಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿನಿ ಸೇರಿ 6 ಜನರ ಬಂಧನ
( 5000 teachers appointment Karnataka : minister B.C.Nagesh )