CET Result : ಸಪ್ಟೆಂಬರ್‌ 20 ಸಿಇಟಿ ಫಲಿತಾಂಶ : ಸಚಿವ ಅಶ್ವತ್ಥ್‌ ನಾರಾಯಣ

ಬೆಂಗಳೂರು : ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಸಪ್ಟೆಂಬರ್‌ ೨೦ರಂದು ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್‌ ನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಇಟಿ ಫಲಿತಾಂಶವನ್ನು ಪ್ರಕಟಿಸುವ ನಿಟ್ಟಿನಲ್ಲಿ ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಸಿಇಟಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಲಾಗಿತ್ತು. ಇದೀಗ ಸಪ್ಟೆಂಬರ್‌ ೨೦ರಂದು ಫಲಿತಾಂಶವನ್ನು ಪ್ರಕಟಿಸುತ್ತೇವೆ. ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿತ್ತು. ಹೀಗಾಗಿ ಮೌಲ್ಯಾಂಕನದ ಆಧಾರದ ಮೇಲೆ ಎಸ್‌ಎಸ್‌ಎಲ್‌ಸಿ, ಪ್ರಥಮ ಪಿಯುಸಿ ಅಂಕಗಳನ್ನು ಆಧರಿಸಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆದರೆ ಉನ್ನತ ಶಿಕ್ಷಣಕ್ಕೆ ಈ ಬಾರಿ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೇ ಕೇವಲ ಸಿಇಟಿ ಅಂಕಗಳನ್ನು ಮಾತ್ರವೇ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಈ ಬಾರಿಯ ಸಿಇಟಿ ಪರೀಕ್ಷೆ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ.

ಇದನ್ನೂ ಓದಿ : SSLC ಉತ್ತೀರ್ಣರಾದವರಿಗೆ ಇಲ್ಲಿದೆ ಗುಡ್‌ನ್ಯೂಸ್‌ : ಡಿಪ್ಲೋಮಾ ಪ್ರವೇಶಕ್ಕೆ ಸೆ.20ರ ವರೆಗೆ ಅವಕಾಶ

ಇದನ್ನೂ ಓದಿ :  ಶೀಘ್ರದಲ್ಲಿಯೇ 17 ಸಾವಿರ ಅತಿಥಿ ಉಪನ್ಯಾಸಕರ ನೇಮಕ : ಸಚಿವ ಅಶ್ವಥ್ ನಾರಾಯಣ

(Karnataka : CET Result 2021 Announce September 20 : Minister AshwathNarayana)

Comments are closed.