ಬೆಂಗಳೂರು : ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ಉನ್ನತ ಶಿಕ್ಷಣ ಇಲಾಖೆ ಗುಡ್‌ನ್ಯೂಸ್ ಕೊಟ್ಟಿದ್ದು. ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಕಾಲಾವಕಾಶವನ್ನು ಸೆ.20ರ ವರೆಗೆ ವಿಸ್ತರಣೆಯನ್ನು ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಒಟ್ಟು 62 ಸರಕಾರಿ, 34 ಅನುದಾನಿತ ಪಾಲಿಟೆಕ್ನಿಕ್ ಪ್ರವೇಶಾವಕಾಶವನ್ನು ಸೆ.20ರ ಸಂಜೆಯ ಕಚೇರಿ ಅವಧಿವರೆಗೆ ವಿಸ್ತರಣೆಯನ್ನು ಮಾಡಲಾಗಿದೆ. ವಿದ್ಯಾರ್ಥಿಗಳು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ. ಪ್ರಮುಖವಾಗಿ ಪ್ರವೇಶಾವಧಿಯನ್ನು ವಿಸ್ತರಣೆ ಮಾಡುವಂತೆ ಪಾಲಿಟೆಕ್ನಿಕ್‌ಗಳ ಪ್ರಾಂಶುಪಾಲರು ಕೋರಿಕೆಯನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಸ್ತರಣೆಯನ್ನು ಮಾಡಲಾಗಿದೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿತ್ತು. ಪಿಯುಸಿ ಪ್ರವೇಶಾವಕಾಶ ಸಾಧ್ಯವಾಗದ ವಿದ್ಯಾರ್ಥಿಗಳು ಡಿಪ್ಲೋಮಾ ತರಗತಿಗಳಿಗೆ ಸೇರ್ಪಡೆಗೊಳ್ಳುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ.
(Good News For SSLC Pass Students : Diploma Admission period extend)