ಬೆಂಗಳೂರು : ಪುನರಾವರ್ತಿತ ವಿದ್ಯಾರ್ಥಿಗಳು, ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಎಷ್ಟು ಮಂದಿ ಉತ್ತೀರ್ಣರಾಗಿದ್ದಾರೆ ಅನ್ನುವ ಮಾಹಿತಿ ಇಲ್ಲಿದೆ. ಅಲ್ಲದೇ ಫಲಿತಾಂಶ ವೀಕ್ಷಿಸಿಲು ಈ ಕೆಳಗಿ ಲಿಂಕ್ ಕ್ಲಿಕ್ ಮಾಡಿದೆ.
ರಾಜ್ಯದಲ್ಲಿ ಒಟ್ಟು 18414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಪೈಕಿ 18,414 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಆದರೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಖಾಸಗಿಯಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿತ್ತು. ಅಲ್ಲದೇ ಹಲವು ವಿದ್ಯಾರ್ಥಿಗಳು ಫಲಿತಾಂಶವನ್ನು ತಿರಸ್ಕರಿಸಿ ಪರೀಕ್ಷೆಗೆ ಹಾಜರಾಗಿದ್ದರು.
ಇದನ್ನೂ ಓದಿ : ಶಾಲಾ ಮಕ್ಕಳಿಗೆ ಕೊರೊನಾ ಟೆಸ್ಟ್ ಕಡ್ಡಾಯ : ಕೋವಿಡ್ ತಾಂತ್ರಿಕ ಸಮಿತಿ ಸಲಹೆ
ಇದನ್ನೂ ಓದಿ : Tuition Fees Relief : ವಿದ್ಯಾರ್ಥಿ, ಪೋಷಕರಿಗೆ ಗುಡ್‌ನ್ಯೂಸ್ ಕೊಟ್ಟ ಹೈಕೋರ್ಟ್
(Karnataka Education minister B C Nagesh Announces Second PUC Result in Bangalore )