BIG NEWS : ಶಿಕ್ಷಕರಿಗೆ ಬಿಗ್‌ ಶಾಕ್‌ ಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಾಜ್ಯ ಸರಕಾರ ಬಿಗ್‌ಶಾಕ್‌ ಕೊಟ್ಟಿದೆ. ಅನ್ಯ ಕಾರ್ಯಕ್ಕಾಗಿ ನಿಯೋಜನೆಗೊಂಡಿರುವ ಶಿಕ್ಷಕರು ತಮ್ಮ ಮಾತೃ ಇಲಾಖೆ ಮರಳಿ ಕರ್ತವ್ಯ ನಿರ್ವಹಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸುವ ಮೂಲಕ ಬಿಗ್‌ ಶಾಕ್‌ ಕೊಟ್ಟಿದೆ.

ರಾಜ್ಯದಲ್ಲಿ ಜಾರಿಯಲ್ಲಿರುವ ಸಾಕ್ಷರತಾ ಅಭಿಯಾನ ಸೇರಿದಂತೆ ಹಲವು ಸರಕಾರಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅನುಮತಿಯನ್ನು ಪಡೆದು ಶಾಲಾ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದರಿಂದಾಗಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಎದುರಾಗಿದೆ. ಅಲ್ಲದೇ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲೀಗ ರಾಜ್ಯ ಸರಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.

ಇದನ್ನೂ ಓದಿ : ಉಪನ್ಯಾಸಕರ ನೇಮಕಕ್ಕೆ Ph.D ಕಡ್ಡಾಯವಲ್ಲ : ಸ್ಪಷ್ಟನೆ ನೀಡಿದ ಕೇಂದ್ರ ಶಿಕ್ಷಣ ಸಚಿವಾಲಯ

ರಾಜ್ಯದಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರನ್ನೇ ನಿಯೋಜನೆ ಮಾಡಲಾಗಿತ್ತು. ಈ ನಿಯೋಜನೆಯ ಅವಧಿ 2021ಕ್ಕೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಜ್ಞಾಪನೆಯನ್ನು ಹೊರಡಿಸಿದ್ದು, ತಕ್ಷಣದಿಂದಲೇ ಅನ್ಯ ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು ಶಿಕ್ಷಣ ಸಂಸ್ಥೆಗೆ ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಈ ಮೂಲಕ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗೆ ಚುರುಕು ಮುಟ್ಟಿಸುವ ಕಾರ್ಯಕ್ಕೆ ಮುಂದಾಗಿದೆ.

ಇದನ್ನೂ ಓದಿ : GOOD NEWS : ಕನ್ನಡ ಮಾಧ್ಯಮದಲ್ಲಿ ಕಲಿಯ ಬಹುದು ಇಂಜಿನಿಯರಿಂಗ್ ಶಿಕ್ಷಣ

(State government order for teachers returning to the Department of Education )

Comments are closed.