ರಾಜ್ಯದ ಸರಕಾರಿ ಶಾಲೆಗಳಲ್ಲಿನ್ನು UKG, LKG ತರಗತಿ ಆರಂಭ

0

ಬೆಂಗಳೂರು : ಕೊರೊನಾ ವೈರಸ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ಪೋಷಕರಿಗೆ ಸರಕಾರಿ ಶಾಲೆಗಳ ಮೇಲಿನ ಪ್ರೀತಿ ಹೆಚ್ಚಾಗಿದೆ. ತಮ್ಮ ಮಕ್ಕಳನ್ನು ಈ ಬಾರಿ ಶಾಲೆಗಳಿಗೆ ಸೇರಿಸಲು ಪೋಷಕರು ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಶಾಲೆಗಳಲ್ಲಿ UKG ಮತ್ತು LKG  ತರಗತಿಗಳನ್ನು ಆರಂಭಿಸಲು ಸರಕಾರ ಮುಂದಾಗಿದೆ.  

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶಾಲೆಗಳಲ್ಲಿ ಎಲ್ ಕೆಜಿ ಹಾಗೂ ಯು ಕೆಜಿ ಆರಂಭಿಸಲು ಒಪ್ಪಿಗೆ ಸೂಚಿಸಲಾಗಿದೆ. ರಾಜ್ಯದಲ್ಲಿರುವ ಸುಮಾರು 276 ಸರಕಾರಿ ಪಬ್ಲಿಕ್ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭವಾಗಲಿವೆ.  

ಇಷ್ಟು ವರ್ಷ ದುಬಾರಿ ಬೆಲೆತೆತ್ತು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿದ್ದ ಪೋಷಕರು ಇದೀಗ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸರಕಾರಿ ಶಾಲೆಗಳತ್ತ ವಾಲುತ್ತಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಇದೀಗ ಮಕ್ಕಳಿಗೆ ಆಂಗ್ಲ ಮಾಧ್ಯಮ ಶಿಕ್ಷಣವನ್ನು ನೀಡಲು ಮುಂದಾಗಿದೆ. ಮಾತ್ರವಲ್ಲ ಶಾಲೆಗಳಲ್ಲಿ ಮೂಲಸೌಕರ್ಯ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Leave A Reply

Your email address will not be published.