ಮಂಗಳವಾರ, ಏಪ್ರಿಲ್ 29, 2025
Homeeducationರಾಜ್ಯದಲ್ಲಿ ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ

- Advertisement -

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ರಿಲೀಸ್​ ಆಗಿದೆ. ಏಪ್ರಿಲ್​ 16ರಿಂದ ಮೇ 06ರವರೆಗೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.


ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಏಪ್ರಿಲ್‌ 16ರಂದು ಗಣಿತ, 18ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, 20ರಂದು ಇತಿಹಾಸ, ಭೌತವಿಜ್ಞಾನ, 21ರಂದು ಸಂಸ್ಕೃತ, 22ರಂದು ವ್ಯವಹಾರ ಅಧ್ಯಯನ, 23ರಂದು ರಸಾಯನ ವಿಜ್ಞಾನ, 25ರಂದು ಅರ್ಥಶಾಸ್ತ್ರ, 26ರಂದು ಹಿಂದಿ, 28ರಂದು ಕನ್ನಡ, 30ರಂದು ಸಮಾಜಶಾಸ್ತ್ರ, ಮೇ 2ರಂದು ಭೌತವಿಜ್ಞಾನ, ಭೋಗೋಳ ವಿಜ್ಞಾನ, ಮೇ 4ರಂದು ಇಂಗ್ಲಿಷ್‌, ಮೇ 6ರಂದು ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ವಿಜ್ಞಾನ ಪರೀಕ್ಷೆಗಳು ನಡೆಯಲಿದೆ.

ಮಾರ್ಚ್​ 28ರಿಂದ ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಅಂತಿಮಗೊಳಿಸಲಾಗಿದೆ. ಕೋವಿಡ್​ ಸೋಂಕಿನಿಂದಾಗಿ ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಇದೀಗ ರಾಜ್ಯದಲ್ಲಿ ಕೋವಿಡ್​ ಸೋಂಕಿನಲ್ಲಿ ಇಳಿಕೆ ಕಂಡು ಬಂದಿದೆ. ಹೀಗಾಗಿ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಯ ವೇಳಾಪಟ್ಟಿಗಳನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್​ 28ರಿಂದ ಏಪ್ರಿಲ್​ 13ರವರೆಗೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನ 2:30ರಿಂದ 5:45ಅವಧಿಯ ವೇಳಾಪಟ್ಟಿಯಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ನಿರ್ದೇಶಕರು ಹೇಳಿದ್ದಾರೆ.


ಮಾರ್ಚ್​ 28ರಿಂದ ಏಪ್ರಿಲ್​ 13ರವರೆಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಯಲಿದೆ. ಏಪ್ರಿಲ್​ 20ರ ಒಳಗೆ ಮೌಲ್ಯಮಾಪನವನ್ನು ಮಾಡಲಾಗುತ್ತದೆ. ಏಪ್ರಿಲ್​ 30ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು .ಪ್ರಥಮ ಪಿಯುಸಿ ವಾರ್ಷಿಕ ಹಾಗೂ ಪೂರಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಸುವಂತೆ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರಿಗೆ ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ.
ಏಪ್ರಿಲ್​ 30ರ ಫಲಿತಾಂಶದ ಬಳಿಕ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೇ 25ರಿಂದ ಜೂನ್​ ಆರನೇ ತಾರೀಖಿನವರೆಗೆ ಪೂರಕ ಪರೀಕ್ಷೆಗಳು ನಡೆಯಲಿದೆ. ಈ ಪೂರಕ ಪರೀಕ್ಷೆಗಳಿಗೆ ಶುಲ್ಕ ಪಾವತಿ ಮಾಡಲು ಮೇ 16 ಕೊನೆಯ ದಿನಾಂಕವಾಗಿದೆ. ಪೂರಕ ಪರೀಕ್ಷೆಯ ಫಲಿತಾಂಶಗಳು ಜೂನ್​ 15ರಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

karnataka puc exam time table announced and here is the date

ಇದನ್ನು ಓದಿ : 22 students wearing hijab : ಕುಂದಾಪುರದಲ್ಲಿ ಸರಕಾರದ ಆದೇಶಕ್ಕೆ ದೋಂಟ್‌ ಕೇರ್‌ : ಹಿಜಾಬ್‌ ಧರಿಸಿ ಬಂದ 22 ವಿದ್ಯಾರ್ಥಿನಿಯರು

ಇದನ್ನೂ ಓದಿ : Hijab Explainer: ಹಿಜಾಬ್ ಎಂದರೇನು? ಬುರ್ಖಾ, ನಿಕಾಬ್‌ಗೂ ಹಿಜಾಬ್‌ಗೂ ಇರುವ ವ್ಯತ್ಯಾಸವೇನು?

RELATED ARTICLES

Most Popular