ಭಾನುವಾರ, ಏಪ್ರಿಲ್ 27, 2025
Homeeducationಪಿಯುಸಿ ಪರೀಕ್ಷೆಯಲ್ಲಿ ಗ್ರಾಮೀಣ ಪ್ರತಿಭೆ ಶ್ಯಾಮಿಲಿ ಕಾಂಚನ್‌ಗೆ 95% ಫಲಿತಾಂಶ

ಪಿಯುಸಿ ಪರೀಕ್ಷೆಯಲ್ಲಿ ಗ್ರಾಮೀಣ ಪ್ರತಿಭೆ ಶ್ಯಾಮಿಲಿ ಕಾಂಚನ್‌ಗೆ 95% ಫಲಿತಾಂಶ

- Advertisement -

ಕುಂದಾಪುರ : ಆರ್.ಎನ್.‌ಶೆಟ್ಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ಯಾಮಿಲಿ ಕಾಂಚನ್‌ (Shamili Kanchan) ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ(Karnataka PUC results 2023) ಶೇಕಡಾ 95 ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಲಾಡಿ ಕಲ್ತೋಡ್ಮಿ ಮನೆ ಮಂಜುನಾಥ ಕಾಂಚನ್‌ ಹಾಗೂ ಮೊಳಹಳ್ಳಿ ಕೈಲ್‌ಕೆರೆಯ ನಿವಾಸಿ ಶೋಭಾ ಮಂಜುನಾಥ ಕಾಂಚನ್‌ ಅವರ ಪುತ್ರಿಯಾಗಿದ್ದಾಳೆ.

ಯಡಾಡಿ ಮತ್ಯಾಡಿಯ ಲಿಟ್ಲ್‌ ಸ್ಟಾರ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸವನ್ನು ಪಡೆದಿರುವ ಶ್ಯಾಮಿಲಿ ಶೇಕಡಾ 81ರಷ್ಟು ಅಂಕ ಪಡೆದಿರುತ್ತಾರೆ. ಸಾಫ್ಟ್‌ವೇರ್‌ ಇಂಜಿನಿಯರ್‌ ಆಗುವ ಬಯಕೆ ಹೊಂದಿದ್ದಾರೆ. ಇನ್ನು ತಂದೆ ಮಂಜುನಾಥ ಕಾಂಚನ್‌ ಅವರು ಮಗಳನ್ನು ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಮಾಡಬೇಕೆಂಬ ಕನಸು ಕಂಡಿದ್ದು, ಮಗಳು ಇದೀಗ ತಂದೆಯ ಕನಸನ್ನು ಸಾಕಾರ ಮಾಡುವತ್ತ ದಾಪುಗಾಲು ಇರಿಸಿದ್ದಾಳೆ. ಬಸ್‌ ಸಂಪರ್ಕವೇ ಇಲ್ಲದ ಪ್ರದೇಶದಲ್ಲಿ ನೆಲೆಸಿರುವ ಶ್ಯಾಮಿಲಿ ಕಾಂಚನ್‌ ನಿತ್ಯವೂ ಮೂರು ಕಿಲೋ ಮೀಟರ್‌ ನಡೆದುಕೊಂಡು ಕಾಲೇಜಿಗೆ ತೆರಳಿದ್ದು, ಇದೀಗ ಶೈಕ್ಷಣಿಕ ಸಾಧನೆ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ.

Karnataka PUC results 2023: ಮರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ ?

ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯು ಕಳೆದ ಮಾರ್ಚ್‌ ತಿಂಗಳಲ್ಲಿ ಕಲೆ, ವಿಜ್ಞಾನ ಮತ್ತು ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶ ಇಂದು ಹೊರಬಿದ್ದಿದೆ. ಇದೀಗ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಯಾವುದೇ ವಿಷಯದಲ್ಲಿ ಅನುತ್ತೀರ್ಣ ಗೊಂಡರೆ ಯಾವುದೇ ಉದ್ವೇಗಕ್ಕೆ ಒಳಗಾಗದೇ ಮರು ಪರೀಕ್ಷೆ (Second PUC re-examination) ಬರೆಯುವ ಮೂಲಕ ಉತ್ತಮ ಭವಿಷ್ಯವನ್ನು ಕಾಣಬಹುದು. ಅದಕ್ಕಾಗಿ ಈ ಕೆಳಗೆ ತಿಳಿಸಿದ ಕ್ರಮವನ್ನು ಅನುಸರಿಸಬಹುದಾಗಿದೆ.

ಕರ್ನಾಟಕ ದ್ವಿತೀಯ ಪಿಯುಸಿ (Karnataka PUC results 2023) ಮರು ಪರೀಕ್ಷೆಗೆ ಅರ್ಜಿ ಸಲ್ಲಿಸುವುದು ಹೇಗೆ ?

ಮೊದಲ ಪ್ರಯತ್ನದಲ್ಲಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಹಾಜರಾಗಲು ಅವಕಾಶವಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಮತ್ತು ಉನ್ನತ ಶಿಕ್ಷಣವನ್ನು ಪ್ರವೇಶಿಸಲು ಅವರಿಗೆ ಎರಡನೇ ಅವಕಾಶವನ್ನು ನೀಡಲಾಗುತ್ತಿದೆ. ಇಲಾಖೆ ನಿಗದಿ ಪಡಿಸಿರುವ ಅರ್ಜಿ ಫಾರ್ಮ್‌ ಭರ್ತಿ ಮಾಡಿ ಪರೀಕ್ಷಾ ಶುಲ್ಕವನ್ನು ಪಾವತಿಸಿ ಪರೀಕ್ಷೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. PUC ಫಲಿತಾಂಶಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಬ್ಯಾಂಡ್ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳು 2023 ಅನ್ನು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಮತ್ತು ತಮ್ಮ ಪ್ರವೇಶ ಕಾರ್ಡ್‌ನಲ್ಲಿರುವ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಲಾಗ್ ಇನ್ ಮಾಡುವ ಮೂಲಕ ಪರಿಶೀಲಿಸಬಹುದು.

ಈ ಬಾರಿ ದ್ವಿತೀಯ ಪಿಯುಸಿ ಶೇ. 74.67ರಷ್ಟು ಫಲಿತಾಂಶ ಬಂದಿದೆ. ಪ್ರತಿ ಸಲದಂತೆ ಈ ಬಾರಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪಿಯುಸಿ ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ಉಡುಪಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಕೊಡಗು ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿದ್ದರೆ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನಿಯಾಗಿದೆ. ಉತ್ತರ ಕನ್ನಡ ಶೇ. 90, ವಿಜಯಪುರ ಶೇ. 85, ಚಿಕ್ಕಮಗಳೂರು ಶೇ. 83ರಷ್ಟು ಫಲಿತಾಂಶ ದಾಖಲಿಸಿದೆ. ಈ ಬಾರಿ ರಾಜ್ಯದ 5,716 ಪಿಯು ಕಾಲೇಜುಗಳಿಂದ ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 3,63,698 ಬಾಲಕರು ಮತ್ತು 3,62.497 ಬಾಲಕಿಯರು. ಇದರಲ್ಲಿ 6.29 ಲಕ್ಷ ವಿದ್ಯಾರ್ಥಿಗಳು ಹೊಸಬರು (ಫ್ರೆಷ​ರ್ಸ್) , 25,847 ಖಾಸಗಿ ಮತ್ತು 70,589 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯ- 2,47,260 ಮತ್ತು ವಿಜ್ಞಾನದಿಂದ 2,44,120 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.

ಇದನ್ನೂ ಓದಿ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರೀ ಕೂಡ ಮೇಲುಗೈ ಸಾಧಿಸಿದ ಬಾಲಕಿಯರು

ಇದನ್ನೂ ಓದಿ : CBSE ಬೋರ್ಡ್ ಪರೀಕ್ಷೆ 2023 : 10 ನೇ ತರಗತಿ ಫಲಿತಾಂಶ ಶೀಘ್ರದಲ್ಲೇ ಪ್ರಕಟ

ಇದನ್ನೂ ಓದಿ : ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್ : ರಜಾದಿನ ಹೆಚ್ಚಳ, ಶಾಲಾ ದಿನಗಳಲ್ಲಿ ಕಡಿತ

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular