ಬೆಂಗಳೂರು : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆಗಳು ಜೂನ್ 13 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ (school and colleges holiday tomorrow) ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ವಿಜಯಪುರ, ಬಾಗಲಕೋಟ ಮತ್ತು ಬೆಳಗಾವಿಯ ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಪದವೀಧರ ಮತ್ತು ಶಿಕ್ಷಕರ ಪರಿಷತ್ ಚುನಾವಣೆ ನಡೆಯಲಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ದಕ್ಷಿಣ ಪದವೀಧರ ಕ್ಷೇತ್ರದಲ್ಲಿ. ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಜಯಪುರ, ಬಾಗಲಕೋಟ ಮತ್ತು ಬೆಳಗಾವಿ .ಪಶ್ಚಿಮ ಬೋಧಕ ಕ್ಷೇತ್ರದಲ್ಲಿ ಧಾರವಾಡ, ಹಾವೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 13ರಂದು ನಡೆಯಲಿದೆ.

ಖಾಸಗಿ ಶಾಲೆಗಳು ಮತ್ತು ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು ಮತ್ತು ಇತರ ಬ್ಯಾಂಕ್‌ಗಳು ಮತ್ತು ಖಾಸಗಿ ಕಾರ್ಖಾನೆಗಳಿಗೆ ವಿಶೇಷ ರಜೆ ಘೋಷಿಸಲಾಗಿದೆ.
ಇಂಟಿಗ್ರೇಟೆಡ್ ಕೋಚಿಂಗ್ ಹೆಸರಿನಲ್ಲಿ ಕಾಲೇಜುಗಳಿಂದ ಸುಲಿಗೆ : ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
ಬೆಂಗಳೂರು : ಶಿಕ್ಷಣವೇ ಸುಲಿಗೆ ಎಂಬ ಸ್ಥಿತಿ ತಲುಪಿರುವ ಹೊತ್ತಿನಲ್ಲಿ ದ್ವಿತಿಯ ಪಿಯುಸಿವರೆಗೆ ಶಿಕ್ಷಣ ನೀಡುವ ಸಂಸ್ಥೆಗಳು ಇಂಟಿಗ್ರೇಟೆಡ್ ಕೋಚಿಂಗ್ (Integrated coaching ) ಹೆಸರಿನಲ್ಲಿ ಪಠ್ಯದ ಜೊತೆ ನೀಟ್, ಜೆಇಇ ಮತ್ತು ಸಿಇಟಿಗೆ ತರಬೇತಿ ನೀಡುವ ಮೂಲಕ ಲಕ್ಷಾಂತರ ರೂಪಾಯಿ ಸುಲಿಗೆ ಮಾಡುತ್ತವೆ. ಆದರೆ ಈಗ ಈ ಸುಲಿಗೆಗೆ ಕಡಿವಾಣ ಹಾಕಲು ಪದವಿಪೂರ್ವ ಶಿಕ್ಷಣ ಇಲಾಖೆ ನಿಯಮಾವಳಿ ರೂಪಿಸಿದೆ.
ಇಂಟೆಗ್ರೇಟೆಡ್ ಕೋಚಿಂಗ್ ವ್ಯವಸ್ಥೆಯನ್ನು ಬಹುತೇಕ ಖಾಸಗಿ ಕಾಲೇಜುಗಳಲ್ಲಿ ಅಳವಡಿಸಿಕೊಂಡಿದೆ. ಕೆಲವು ಕಾಲೇಜುಗಳು ಈ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡಿವೆ. ಈ ಸಂಸ್ಥೆಗಳ ಬೋಧಕರು ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಾರೆ. ಇತ್ತೀಚೆಗೆ ಕೆಲವು ಕಾಲೇಜುಗಳಲ್ಲಿ ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ನೀಡುವುದಾಗಿ ವಿದ್ಯಾರ್ಥಿಗಳ ಮನವೊಲಿಸಿ ಹಣ ಕೀಳುತ್ತಾರೆ ಎನ್ನುವ ಆರೋಪಗಳಿವೆ. ಆದರೆ ಇನ್ಮುಂದೆ ಇದಕ್ಕೆ ಕಡಿವಾಣ ಬೀಳಲಿದೆ. ಇಂಟೆಗ್ರೇಟೆಡ್ ಕೋಚಿಂಗ್ ಇರುವ ಕಾಲೇಜುಗಳಲ್ಲಿ ವರ್ಷಕ್ಕೆ 1.25 ಲಕ್ಷದಿಂದ 3 ಲಕ್ಷದವರೆಗೆ ವಿದ್ಯಾರ್ಥಿಗಳಿಂದ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ವಿವಿಧ ಪರೀಕ್ಷೆಗಳ ಅನುಸಾರ ಪ್ಯಾಕೇಜ್ ರೂಪದಲ್ಲಿ ಶುಲ್ಕ ಪಡೆಯಲಾಗುತ್ತದೆ ಎಂಬ ಆರೋಪಗಳು ಇದೆ.
- ಪಿಯು ಕಾಲೇಜುಗಳಲ್ಲಿ ಸಿಇಟಿ, ಜೆಇಇ, ನೀಟ್, ಇಂಟೆಗ್ರೆಟೆಡ್ ಕೋರ್ಸ್, ಬ್ರಿಡ್ಜ್ ಕೋರ್ಸ್ ಇತ್ಯಾದಿ ಹೆಸರಿನಲ್ಲಿ ಕಾನೂನು ಬಾಹಿರವಾಗಿ ನಿಗದಿಪಡಿಸಿದ ಶುಲ್ಕ ಮಾತ್ರ ಸ್ವೀಕರಿಸಬೇಕು.
- ಇತರೆ ಸಂಘ ಸಂಸ್ಥೆ ಅಥವಾ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸೇರಿ ಬೋಧನೆ ಮಾಡುವುದು ಕಂಡು ಬಂದಲ್ಲಿ ಕಾಲೇಜಿನ ಮಾನ್ಯತೆ ರದ್ದತಿ ಎಚ್ಚರಿಕೆ.
- ಈ ಸಂಸ್ಥೆಗಳ ಪ್ರಾಂಶುಪಾಲರ ಮತ್ತು ಆಡಳಿತ ಮಂಡಳಿಯ ಮೇಲೆ ಕಾನೂನು ಕ್ರಮ ಜರುಗಿಸುವ ವಾರ್ನಿಂಗ್.
- ನಿಗದಿಪಡಿಸಿದ ಪಠ್ಯಕ್ರಮವನ್ನು ಹೊರತುಪಡಿಸಿ ಇತರೆ ಯಾವುದೇ ಪಠ್ಯಕ್ರಮ ಬೋಧಿಸಬಾರದು.
- ಗಮನಕ್ಕೆ ಬಂದರೆ, ಸಂಸ್ಥೆಯ ಆ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯ ಮೇಲೆ ಕಾನೂನು ಕ್ರಮ.
- ಪರಸ್ಪರ ವಿನಿಯಮದೊಂದಿಗೆ ಆ ಸಂಸ್ಥೆಯ ಹೆಸರನ್ನು ತಮ್ಮ ಕಾಲೇಜಿನ ಜತೆ ಬಳಕೆ ಮಾಡಿ ಯಾವುದೇ ರೀತಿ ಶೈಕ್ಷಣಿಕ ಚಟುವಟಿಕೆ ನಡೆಸತಕ್ಕದ್ದಲ್ಲ.
- ಬೇರೆ ಪಠ್ಯ ವಸ್ತುವನ್ನು ಖರೀದಿಸಲು ವಿದ್ಯಾರ್ಥಿಗಳಿಗೆ ಅಥವಾ ಪೋಷಕರಿಗೆ ಒತ್ತಡ ಹೇರುವಂತಿಲ್ಲ.
ಆದರೆ ಪದವಿ ಪೂರ್ವ ಶಿಕ್ಷಣ ಇಲಾಖೆ ರೂಪಿಸಿರುವ ಈ ನಿಯಮಕ್ಕೆ ಎಷ್ಟು ಬೆಲೆ ಸಿಗಲಿದೆ ಅನ್ನೋದನ್ನು ಕಾದುನೋಡಬೇಕಿದೆ. ಯಾಕೆಂದರೇ ಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮಕ್ಕೆ ಶಿಕ್ಷಣ ಸಂಸ್ಥೆಗಳು ಚಾಪೆಯಡಿ ತೂರಿಕೊಳ್ಳುವಂತ ಉಪಾಯಗಳನ್ನು ಹುಡುಕಿಕೊಳ್ಳೋ ಸಾಧ್ಯತೆ ಇದೆ.
ಇದನ್ನೂ ಓದಿ : Rohit Chakratirtha : ಸಂಶೋಧಕನಿಗೆ ಮತಕ್ಕಿಂತ ಸತ್ಯ ಮುಖ್ಯ: ಬಿಜೆಪಿ ವಿರುದ್ಧವೇ ತಿರುಗಿಬಿದ್ದ ರೋಹಿತ್ ಚಕ್ರತೀರ್ಥ
ಇದನ್ನೂ ಓದಿ : KCET 2022 ಆನ್‌ಲೈನ್ ನೋಂದಣಿ ಆರಂಭ : kea.kar.nic.in ನಲ್ಲಿ ಅರ್ಜಿ ಸಲ್ಲಿಸಿ
Karnataka school and colleges holiday tomorrow June 13