ಲಾಕ್ ಡೌನ್ ಹಿನ್ನೆಲೆ ಶಿಕ್ಷಕರಿಗೆ ರಜೆ ವಿಸ್ತರಣೆ : ನಾಳೆ ಸರಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಕೊರೊನಾ ಲಾಕ್ ಡೌನ್ ನಡುವಲ್ಲೇ ಶಿಕ್ಷಕರು ಬಸ್ ಸೌಕರ್ಯವಿಲ್ಲದೇ ಶಾಲೆಗೆ ತೆರಳಲು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಒಪ್ಪಿಗೆ ಸೂಚಿಸಿದ್ದು, ಅದೇಶ ನಾಳೆ ಹೊರಬೀಳಲಿದೆ.

ರಾಜ್ಯದಲ್ಲಿ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಜಾರಿಯಾಗಿದ್ರೂ ಬಸ್ ಸಂಚಾರಕ್ಕೆ ಅನುಮತಿ ನೀಡಿಲ್ಲ. ಈ ನಡುವಲ್ಲೇ ಶಿಕ್ಷಣ ಇಲಾಖೆ ಜುಲೈ 1ರಿಂದ ಶಾಲಾರಂಭಕ್ಕೆ ಮುಂದಾಗಿದೆ. ಅಲ್ಲದೇ ಜೂನ್ 15ರಿಂದಲೇ ಶಿಕ್ಷಕರು ಕಡ್ಡಾಯವಾಗಿ ಶಾಲೆಗಳಿಗೆ ಹಾಜರಾಗುವಂತೆ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಆದ್ರೆ ಬಸ್ ಸಂಚಾರವಿಲ್ಲದೆ ಶಿಕ್ಷಕರು ಶಾಲೆಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಅದ್ರಲ್ಲೂ ಮಹಿಳಾ ಶಿಕ್ಷಕರು, ಗರ್ಭಿಣಿಯರು, ವಯಸ್ಸಾದವರಿಗೆ ಸ್ವತಃ ವಾಹನಗಳಲ್ಲಿ ತೆರಳುವುದು ಕಷ್ಟಸಾಧ್ಯ. ಅದ್ರಲ್ಲೂ ಬಹುತೇಕ ಶಿಕ್ಷಕರು ಜಿಲ್ಲೆಯಿಂದ ಜಿಲ್ಲೆಗೆ ತೆರಳಿ ಕರ್ತವ್ಯ ನಿರ್ವಹಣೆ ಮಾಡಬೇಕಾಗಿದೆ.

ಈ ನಿಟ್ಟಿನಲ್ಲಿ ಶಿಕ್ಷಕರು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಮಹಿಳಾ ಶಿಕ್ಷಕರ ಸಂಘ, ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು 11 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಬಸ್ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ಶಾಲಾರಂಭದ ದಿನಾಂಕವನ್ನು ಮುಂದೂಡಿಕೆ ಮಾಡುವಂತ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಆಯುಕ್ತರು, ಕಾರ್ಯದರ್ಶಿಗಳು ಸೇರಿದಂತೆ ಎಲ್ಲರಿಗೂ ಮನವಿ ಮಾಡಿಕೊಂಡಿದ್ದರು. ಆದ್ರೂ ಶಿಕ್ಷಣ ಇಲಾಖೆ ಯಾವುದೇ ಕ್ರಮಗಳನ್ನೂ ಕೈಗೊಂಡಿರಲಿಲ್ಲ. ಇದೀಗ ಶಿಕ್ಷಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದು, ಮುಖ್ಯಮಂತ್ರಿಗಳು ಶಿಕ್ಷಕರ ಮನವಿಗೆ ಸ್ಪಂದಿಸಿದ್ದಾರೆ.

ಇದೀಗ ಶಿಕ್ಷಕರ ರಜೆಯ ಅವಧಿಯನ್ನು ಮುಂದೂಡಿಕೆ ಮಾಡುವುದರ ಜೊತೆಗೆ ಶಿಕ್ಷಕರು ಶಾಲೆಗೆ ಹಾಜರಾಗುವ ದಿನಾಂಕವನ್ನು ವಿಸ್ತರಣೆಯಾಗಲಿದೆ. ಈ ಕುರಿತು ನಾಳೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

Comments are closed.