Karnataka School Textbook revision : ಶಾಲಾ ಪಠ್ಯಪುಸ್ತಕ ಪರಿಷ್ಕರಣೆ : 2 ಅಧ್ಯಾಯ ಕೈ ಬಿಡಲು ಸರಕಾರ ನಿರ್ಧಾರ

ಬೆಂಗಳೂರು : (Karnataka School Textbook revision) ರಾಜ್ಯದಾದ್ಯಂತ ಶಾಲಾ ಮಕ್ಕಳು ಬೇಸಿಗೆ ರಜೆ ಕಳೆದು ಶಾಲೆಗಳತ್ತ ಮುಖ ಮಾಡಿದ್ದಾರೆ. ಸದ್ಯ ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರಕಾರದಲ್ಲಿ ಪರಿಷ್ಕರಿಸಲಾದ ಪಠ್ಯಪುಸ್ತಕಗಳಲ್ಲಿ ಕೆಲವು ಅಧ್ಯಾಯಗಳನ್ನು ಕೈಬಿಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಈ ವರ್ಷದಿಂದ 2 ಅಧ್ಯಾಯವನ್ನು ಕೈಬಿಡಲು ಸರಕಾರ ನಿರ್ಧರಿಸಿದೆ.

ಮಂಗಳವಾರ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಸಾಲಿನ ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ವಿವಾದಾತ್ಮಕ ಮತ್ತು ಆಕ್ಷೇಪಾರ್ಹ ಪಠ್ಯಗಳನ್ನು ಕೈಬಿಡಲು ನಿರ್ಧರಿಸಲಾಯಿತು. ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಚರ್ಚಿಸಿ ಘೋಷಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರೆಸ್ಸೆಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್, ಚಿಂತಕ ಚಕ್ರವರ್ತಿ ಸೂಲಿಬೆಲೆ ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ಪಠ್ಯಗಳು ಸೇರಿದಂತೆ ಹಲವು ಅಧ್ಯಾಯಗಳನ್ನು ಶಾಲಾ ಪಠ್ಯಪುಸ್ತಕಗಳಿಂದ ಕೈಬಿಡಲು ಕರ್ನಾಟಕ ಸರಕಾರ ನಿರ್ಧರಿಸಿದೆ.

ಇದನ್ನೂ ಓದಿ : Heat wave Alert Karnataka : ನೆತ್ತಿ ಸುಡುವ ಬಿಸಿಲು, ಕುಡಿಯೋಕೆ ನೀರಿಲ್ಲ : ಶಾಲೆಗಳಲ್ಲಿ ಮಕ್ಕಳ ಗೋಳು ಕೇಳೋರ್ಯಾರು ?

ಬಿಜೆಪಿ ಸರಕಾರ ಪರಿಷ್ಕರಿಸಿ ಪಠ್ಯಪುಸ್ತಕಕ್ಕೆ ಸೇರಿಸಿದ್ದ ವಿಷಯಗಳನ್ನು ಹಿಂಪಡೆಯುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಹಲವು ಶಿಕ್ಷಣ ತಜ್ಞರು ಸಭೆ ನಡೆಸಿ ಪಠ್ಯಪುಸ್ತಕ ಹಿಂಪಡೆಯುವಂತೆ ಮನವಿ ಮಾಡಿದರು.

Karnataka School Textbook revision: govt decide to drop 2 chapter from this year

Comments are closed.