13 Students Corona : ಶಾಲೆ, ಕಾಲೇಜುಗಳೇ ಕೊರೊನಾ ಹಾಟ್‌ಸ್ಪಾಟ್‌ : ಚನ್ನರಾಯಪಟ್ಟಣದಲ್ಲಿ 13 ಮಕ್ಕಳಿಗೆ ಕೊರೊನಾ

ಹಾಸನ : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯನ್ನು ಕಾಣುತ್ತಿದೆ. ಧಾರವಾಡ, ಆನೇಕಲ್‌ನ ಶಾಲೆ, ಕಾಲೇಜಿನಲ್ಲಿ ಕೊರೊನಾ ಸ್ಪೋಟಗೊಂಡ ಬೆನ್ನಲ್ಲೇ ಹಾಸನದಲ್ಲಿ ಹೆಮ್ಮಾರಿ ಕೊರೊನಾ ಆರ್ಭಟಿಸಿದೆ. ಚನ್ನರಾಯಪಟ್ಟಣ ತಾಲೂಕಿನ ವಸತಿ ಶಾಲೆಯೊಂದರ 13 ವಿದ್ಯಾರ್ಥಿಗಳಿಗೆ (13 Students Corona) ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಹಾಸನದಲ್ಲೀಗ ಆತಂಕ ಶುರುವಾಗಿದೆ.

ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡ ಬೆನ್ನಲ್ಲೇ ಇದೀಗ ನಿಧಾನವಾಗಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ವಸತಿ ಶಾಲೆಯಲ್ಲಿ ಕಳೆದ ಒಂದು ತಿಂಗಳ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಇದೀಗ ವಸತಿ ಶಾಲೆಯಲ್ಲಿನ ೧೩ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ.

ವಸತಿ ಶಾಲೆಯಲ್ಲಿ ಒಟ್ಟು ೨೦೦ ವಿದ್ಯಾರ್ಥಿಗಳಿದ್ದು, ಸಿಬ್ಬಂಧಿಗಳಿಗೂ ಕೂಡ ಕೊರೊನಾ ಟೆಸ್ಟ್‌ ನಡೆಸಲಾಗಿದೆ. ವಸತಿ ಶಾಲೆಯಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ಕಾರ್ಯವನ್ನು ಮಾಡಲಾಗುತ್ತಿದೆ. ಅಲ್ಲದೇ ಉಳಿದ ವಿದ್ಯಾರ್ಥಿಗಳ ಮೇಲೆಯೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿಗಾ ಇರಿಸಿದ್ದಾರೆ.

ಇದನ್ನೂ ಓದಿ : ABCD ಬರೆಯಲು ಬಾರದ ಶಿಕ್ಷಕ, ಶಿಕ್ಷಕಿ ಸಸ್ಪೆಂಡ್‌ : ವಿಡಿಯೋ ವೈರಲ್‌

ಇದನ್ನೂ ಓದಿ : School Close : ರಾಜ್ಯದಲ್ಲಿ ಶಾಲೆ, ಕಾಲೇಜುಗಳು ಬಂದ್‌ : ಸುಳಿವು ಕೊಟ್ಟ ಸಿಎಂ ಬೊಮ್ಮಾಯಿ

ಹಾಸನ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಸಾಕಷ್ಟು ಅವಾಂತರವನ್ನು ಉಂಟು ಮಾಡಿತ್ತು. ಆದ್ರೆ ತದನಂತರದಲ್ಲಿ ಕೊರೊನಾ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿತ್ತು. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಶೇ. 0.19ಕ್ಕೆ ಇಳಿಕೆಯಾಗಿತ್ತು. ಆದ್ರೀಗ ೧೩ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿರೋದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಜಿಲ್ಲಾಡಳಿತ ಶಾಲೆ, ಕಾಲೇಜಿಗಳಲ್ಲಿ ಕೊರೊನಾ ಟೆಸ್ಟ್‌ ಮಾಡಿಸಲು ಮುಂದಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ : SDM ಕಾಲೇಜಿನಲ್ಲಿ ಕೊರೊನಾ ಸ್ಪೋಟ : 306 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಇದನ್ನೂ ಓದಿ : Airport High Alert : ಕೊರೋನಾ ಬಳಿಕ Omicron ಆತಂಕ : ಸಿಲಿಕಾನ್ ಸಿಟಿಗೆ ಬಂದ 598 ಜನರ ಮೇಲೆ ವಿಶೇಷ ನಿಗಾ

( Schools and Colleges Corona Hotspot : 13 Students Corona from Channarayapatna Residential School)

Comments are closed.