PUC Exam Time Table : ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು (PUC Exam Time Table) ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಎಪ್ರಿಲ್‌ 22 ರಿಂದ ಮೇ 18 ರ ವರೆಗೆ ಈ ಬಾರಿ ಪರೀಕ್ಷೆಗಳು ನಡೆಯಲಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆಗಳು ನಡೆಯಲಿವೆ.

ಪದವಿ ಪೂರ್ವ ಪರೀಕ್ಷಾ ಮಂಡಳಿ ಎಪ್ರಿಲ್‌ 22 ರಿಂದ ಮೇ 11 ರ ವರೆಗೆ ಪರೀಕ್ಷೆಗಳು ನಡೆಸುವ ಕುರಿತು ತಾತ್ಕಾಲಿಕ ವೇಳಾಪಟ್ಟಿಯನ್ನು ಈ ಹಿಂದೆಯೇ ಪ್ರಕಟಿಸಿತ್ತು. ಅಲ್ಲದೇ ಮೇ ೫ರ ವರೆಗೆ ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿತ್ತು. ಆದರೆ Common Law Admission Test (CLAT), AIMA UGAT ಪರೀಕ್ಷೆ ಹಾಗೂ ನವೋದಯ ವಿದ್ಯಾಲಯದ ಪರೀಕ್ಷೆಗಳು ನಿಗದಿಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ಪರಿಗಣಿಸಿ ಎಪ್ರಿಲ್‌ 22 ರಿಂದ ಮೇ 18 ರ ವರೆಗೆ ಪರೀಕ್ಷೆಗಳನ್ನು ನಡೆಯಸಲು ತೀರ್ಮಾನಿಸಲಾಗಿದೆ. ಆದರೆ ಅಂತಿಮ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶ ಇರುವುದಿಲ್ಲ ಎಂದು ಪದವಿ ಪೂರ್ವ ಪರೀಕ್ಷಾ ಮಂಡಳಿಯ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.

Karnataka Second PUC Exam Time Table released PU Board exams in April 22 to May 18
ಪದವಿಪೂರ್ವ ಶಿಕ್ಷಣ ಇಲಾಖೆಯ ಕಚೇರಿ

ದ್ವಿತೀಯ ಪಿಯು ಪರೀಕ್ಷೆಯ ( PUC Exam Time Table) ಅಂತಿಮ ವೇಳಾಪಟ್ಟಿ

ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ
ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ
ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ
ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ
ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ
ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ
ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ
ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ

ಇದನ್ನೂ ಓದಿ : CA Article ship: ಸಿಎ ಆರ್ಟಿಕಲ್‌ಶಿಪ್; ಭಾರತದ ಬಹು ಬೇಡಿಕೆಯ ಕೋರ್ಸ್ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ

ಇದನ್ನೂ ಓದಿ : ಕನ್ನಡ ಶಾಲೆ ಉಳಿವಿಗೆ ಪಣತೊಟ್ಟ ಉದ್ಯಮಿ : ಗಿಳಿಯಾರು ಶಾಂಭವಿ ಶಾಲೆಗೆ 40 ಕೋಟಿ ರೂ. ದಾನ ಮಾಡಿದ ವಿನೋದ್‌ ಕುಮಾರ್

(Karnataka Second PUC Exam Time Table released PU Board exams in April 22 to May 18)

Comments are closed.